ರಾಯಚೂರು:ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 150 ನೇ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತ, ಜಿ.ಪಂ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆಯ ಸಂಯುಕ್ತಾಶ್ರಯದಲ್ಲಿ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ವಿಚಾರ ಸಂಕೀರಣ ಸರ್ವಧರ್ಮ ಪ್ರಾರ್ಥನೆ, ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು. ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯಿಂದ ಹೆಲ್ಮೆಟ್ ದಿನವೆಂದು ವಿಭಿನ್ನವಾಗಿ ಆಚರಿಸಲಾಯಿತು.
ಜಿ.ಪಂ.ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಮಹಾತ್ಮ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಕಲಾವಿದರಿಂದ ರಘುಪತಿರಾಘವ ರಾಜಾರಾಮ ಗೀತೆ ಹಾಡಲಾಯಿತು ಇದಕ್ಕೆ ಶಾಲಾ ಮಕ್ಕಳು ಧ್ವನಿಗೂಡಿಸಿದರು.
ಗಾಂಧಿ ಜಯಂತಿಯ ಅಂಗವಾಗಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಹೆಲ್ಮೆಟ್ ದಿನವೆಂದು ವಿಭಿನ್ನವಾಗಿ ಆಚರಿಸಲಾಯಿತು. ಸಾರ್ವಜನಿಕರು, ದ್ವಿಚಕ್ರ ವಾಹನದಲ್ಲಿ ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಬಳಸಿ ಅಪಘಾತದಿಂದ ಜೀವ ಉಳಿಸುಕೊಳ್ಳಿ ಎಂಬ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಮುಂದಾಗಿದೆ. ಪೊಲೀಸ್ ಇಲಾಖೆ ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ಹೆಲ್ಮೆಟ್ ಧರಿಸದ ವಾಹನ ಸವಾರರಿಗೆ ಹಿಡಿದು 1000 ದಂಡ ಹಾಕಿ ಅವರಿಗೆ ಅದ್ರಲ್ಲಿ ಹೆಲ್ಮೆಟ್ ನೀಡಿ ಸಂಚಾರಿ ನಿಯಮ ಪಾಲನೆ ಹಾಗೂ ಜೀವ ರಕ್ಷಿಸಲು ಹೆಲ್ಮೆಟ್ ಧರಿಸಿ ಎಂದು ಮನವರಿಕೆ ಮಾಡಿಕೊಡಲಾಯಿತು.