ರಾಯಚೂರು: ಶೌಚಾಲಯಕ್ಕೆ ಹೋಗಿದ್ದಾಗ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಪೊಲೀಸರು ಬಂಧಿಸುವುದರಲ್ಲಿಯಶಸ್ವಿಯಾಗಿದ್ದಾರೆ.
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ... ಆರೋಪಿಗಳ ಹೆಡೆಮುರಿ ಕಟ್ಟಿದ ಸಿರವಾರ ಪೊಲೀಸ್ರು - ಪೊಲೀಸರ ವಶ
ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಸಿರವಾರ ತಾಲೂಕಿನ ಕೆ.ಗುಡದಿನ್ನಿ ಗ್ರಾಮದಲ್ಲಿಘಟನೆ ನಡೆದಿದೆ.ಅತ್ಯಾಚಾರವೆಸಗಿದ ಅದೇ ಗ್ರಾಮದ ಯುವಕರಾದಯಮನಪ್ಪ (21), ಮಂಜು (20), ರಂಗಪ್ಪ (20) ಮೂವರು ಆರೋಪಿಗಳನ್ನು ಸೋಮವಾರ ಪೊಲೀಸರುಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆಎಂದು ಸಿಪಿಐ ಚಂದ್ರಶೇಖರ ತಿಳಿಸಿದ್ದಾರೆ.
ಈ ಕುರಿತು ಸಿರವಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.