ಕರ್ನಾಟಕ

karnataka

ETV Bharat / state

ರಾಯರ ದರ್ಶನ ಪಡೆದ ಶಾಸಕ ಪರಣ್ಣ ಮುನವಳ್ಳಿ - ಪರಣ್ಣ ಮುನವಳ್ಳಿಯಿಂದ ವಿಶೇಷ ಪೂಜೆ

ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಮಂತ್ರಾಲಯಕ್ಕೆ ತೆರಳಿದ್ದು, ರಾಜ್ಯದಲ್ಲಿ ಮಳೆ, ಬೆಳೆ ಸಮೃದ್ಧಿಯಾಗಲಿ ಎಂದು ಬೇಡಿಕೊಂಡಿದ್ದಾಗಿ ಹೇಳಿದ್ದಾರೆ. ಆದರೆ ಸಂಪುಟ ರಚನೆ ವೇಳೆ ಹೋದ್ದರಿಂದ ಬೇರೆ ಕಾರಣಗಳು ಇರಬಹುದಾ ಎಂಬ ಪ್ರಶ್ನೆ ಉದ್ಭವಿಸಿದೆ.

ರಾಯರ ದರ್ಶನ ಪಡೆದ ಶಾಸಕ ಪರಣ್ಣ ಮುನವಳ್ಳಿ

By

Published : Aug 1, 2019, 9:00 PM IST

ರಾಯಚೂರು:ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದ ಸಚಿವ ಸಂಪುಟ ರಚನೆ ಹಿನ್ನೆಲೆಯಲ್ಲಿ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಮಂತ್ರಾಲಯದ ರಾಯರ ದರ್ಶನಕ್ಕೆ ಆಗಮಿಸಿದ್ದಾರೆ.

ರಾಯರ ದರ್ಶನ ಪಡೆದ ಶಾಸಕ ಪರಣ್ಣ ಮುನವಳ್ಳಿ

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಆಗಮಿಸಿ ರಾಯರ ಮೂಲ ಬೃಂದಾವನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಈಟಿವಿ ಭಾರತ ಜೊತೆ ಮಾತನಾಡಿದ ಶಾಸಕ ಪರಣ್ಣ, ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಿರಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು. ತಾವು ಸಚಿವ ಸ್ಥಾನದ ಆಕಾಂಕ್ಷಿಯೇ? ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಆಯಾ ಜಿಲ್ಲೆಗೆ ಸ್ಥಳೀಯ ಶಾಸಕರಿಗೆ ಉಸ್ತುವರಿ ನೀಡಿದರೆ ಜಿಲ್ಲೆಯ ಅಭಿವೃದ್ಧಿಯಾಗುತ್ತದೆ. ನನಗೆ ಸಚಿವ ಸ್ಥಾನ ನೀಡಿ ಎಂದು ಕೇಳಿಲ್ಲ. ಈ ಬಗ್ಗೆ ಹೈಕಮಾಂಡ್ ಏನೇ ತಿರ್ಮಾನ ಕೈಗೊಂಡರು ಅದಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿದರು.

ABOUT THE AUTHOR

...view details