ರಾಯಚೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ರಾಯಚೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಮೂವರು ಮಹಿಳೆಯರು ಗಾಯಗೊಂಡಿರುವ ಘಟನೆ ಇಲ್ಲಿನ ನೇತಾಜಿ ನಗರ ಬಡಾವಣೆಯ ಈಶ್ವರ ದೇವಾಲಯದ ಸಮೀಪವಿರುವ ಖಾಜಾ ಬೀ ಎನ್ನುವವರ ಮನೆಯಲ್ಲಿ ಗುರುವಾರ ಮಧ್ಯಾಹ್ನದ ವೇಳೆ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಮನೆಯ ಬಾಗಿಲ ಬಳಿ ಇದ್ದ ಮಹಿಳೆ ಹೊರಗಡೆ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನಿನ್ನೆ ಮಧ್ಯಾಹ್ನ ಖಾಜಾ ಬೀ ಎನ್ನುವವರು ಅಡುಗೆ ಅನಿಲ ಬಳಕೆ ಮಾಡಲು ಹೋದಾಗ ಏಕಾಏಕಿ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಪರಿಣಾಮ ಮನೆ ಕೆಲಸ ಮಾಡಲು ಬಂದ ಮಹಿಳೆ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಸಿಲಿಂಡರ್ ಬ್ಲಾಸ್ಟ್ನಿಂದಾಗಿ ಮನೆಯ ಬಾಗಿಲು ಮುರಿದು ತುಣುಕುಗಳು ಹಾಗೂ ಮನೆಯೊಳಗೆ ಇದ್ದ ಮಹಿಳೆ ಹೊರಗಡೆ ರಸ್ತೆಯ ಮೇಲೆ ಬಂದು ಬಿದ್ದಿರುವ ಭಯನಕ ದೃಶ್ಯ ಬಡಾವಣೆಯಲ್ಲಿ ಆಡಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ :ಚಹಾ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ : ವಿಡಿಯೋ ವೈರಲ್
ತೀವ್ರ ಸ್ಫೋಟದಿಂದಾಗಿ ಸುತ್ತಮುತ್ತಲಿನ ನಿವಾಸಿಗಳಲ್ಲಿ ಕೆಲಕಾಲ ಆತಂಕ ಉಂಟಾಗಿತ್ತು. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಒಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ನೇತಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ :ಮನೆಯಲ್ಲಿ ಭೀಕರ ಸ್ಫೋಟ: ನಾಲ್ವರ ಸಾವು, 2 ಕಿಮೀವರೆಗೂ ಕೇಳಿಸಿದ ಸ್ಫೋಟದ ಸದ್ದು
ವ್ಯಕ್ತಿಯ ಬರ್ಬರ ಹತ್ಯೆ: ಜೊತೆಗೆ, ರಾಯಚೂರು ನಗರದ ಹೊರವಲಯದ ಮಲಿಯಬಾದ್ ರಸ್ತೆಯಲ್ಲಿ ಬರುವ ಖಾಸಗಿ ಶಾಲೆಯ ಹತ್ತಿರದ ನಿರ್ಜನ ಪ್ರದೇಶದಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ದುರ್ಘಟನೆ ಜರುಗಿದೆ. ಅಶೋಕನಗರದ ನಿವಾಸಿಯಾಗಿರುವ ಆಂಜಿನೇಯ್ಯ(35) ಮೃತ ವ್ಯಕ್ತಿಯೆಂದು ಗುರುತಿಸಲಾಗಿದೆ.
ಇದನ್ನೂ ಓದಿ :ಕುಡಿದ ಅಮಲಿನಲ್ಲಿ ತನ್ನ 12ನೇ ಪತ್ನಿಯನ್ನೇ ಕೊಂದ ಗಂಡ
ಮೃತ ಆಂಜಿನೇಯ ಹಂದಿ ಸಾಕಣೆ ಮಾಡುತ್ತಿದ್ದರು. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಹತ್ಯೆ ನಡೆದಿರಬಹುದೆಂಬ ಅನುಮಾನ ವ್ಯಕ್ತವಾಗುತ್ತಿದೆ. ಅಲ್ಲದೇ, ಕೈ ಕಾಲುಗಳನ್ನು ಟವಲ್‌ನಿಂದ ಕಟ್ಟಿ ಹೊಡೆದು ಕೊಲೆ ಮಾಡಲಾಗಿದ್ದು, ಮೈಮೇಲೆ ಗಾಯದ ಗುರುತು ಕಂಡು ಬಂದಿದೆ. ಘಟನಾ ಸ್ಥಳಕ್ಕೆ ಯರಗೇರಾ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ :ಕ್ರಿಕೆಟ್ ಪಂದ್ಯಾವಳಿ ವೇಳೆ ತಪ್ಪು ತೀರ್ಪು ಕೊಟ್ಟರೆಂದು ಅಂಪೈರ್ ಹತ್ಯೆಗೈದ ಯುವಕ!
ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವ್ಯಕ್ತಿಯನ್ನು ಕಟ್ಟಿ ಹಾಕಿ, ಹೊಡೆದು ಕೊಲೆ ಮಾಡಲಾಗಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಪ್ರಕರಣದ ತನಿಖೆಯ ಬಳಿ ಸತ್ಯಾಸತ್ಯತೆ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ :ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ಮನೆಯಲ್ಲೇ ಯುವಕ ಶವವಾಗಿ ಪತ್ತೆ.. ಕೊಲೆ ಶಂಕೆ