ಕರ್ನಾಟಕ

karnataka

ETV Bharat / state

ರಾಯಚೂರು: ₹60 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಕಳ್ಳರು - gold shop robbery by the thieves in raichur

ಚಿನ್ನದಂಗಡಿ ದರೋಡೆ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ದೋಚಿ‌ ಕಳ್ಳರು ಪರಾರಿಯಾಗಿರುವ ಘಟನೆ ಕವಿತಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

gold-shop-theft-in-raichuru
60 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಕಳ್ಳರು

By

Published : Jun 9, 2022, 8:28 PM IST

ರಾಯಚೂರು: ಚಿನ್ನದಂಗಡಿ ದರೋಡೆ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ‌ ಕಳ್ಳರು ಪರಾರಿಯಾಗಿರುವ ಘಟನೆ ಕವಿತಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಮಹೇಶ್ ಪತ್ತಾರ್ ಎಂಬುವವರಿಗೆ ಸೇರಿದ ಚಿನ್ನದ ಅಂಗಡಿಗೆ ಖದೀಮರು ಕನ್ನ ಹಾಕಿದ್ದಾರೆ.

ಅಂಗಡಿ ಮಾಲೀಕರು ಊರಲ್ಲಿಲ್ಲದ ಬಗ್ಗೆ ಮಾಹಿತಿ ಇದ್ದವರೇ ಕಳ್ಳತನ‌ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 60 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಸ್ಥಳಕ್ಕೆ ಎಸ್ಪಿ ನಿಖಿಲ್ ಬಿ. ಭೇಟಿ ನೀಡಿದ್ದು, ಬೆರಳಚ್ಚು ತಜ್ಞರು, ಶ್ವಾನದಳ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ.

ಇದನ್ನೂ ಓದಿ:ವಿಜಯಪುರ: ಎಗ್​ರೈಸ್​ನಲ್ಲಿ ವಿಷ ಬೆರೆಸಿ ಮಕ್ಕಳಿಗೆ ಕೊಟ್ಟ ತಂದೆ, ಮಗು ಸಾವು, ಮಗಳು ಅಸ್ವಸ್ಥ

ABOUT THE AUTHOR

...view details