ರಾಯಚೂರು:ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಚಾರವನ್ನು ಬಂದ್ ಮಾಡಲಾಗಿದೆ.
ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಥಗಿತ: ಪ್ರಯಾಣಿಕರ ಪರದಾಟ - ಸರ್ಕಾರಿ ಬಸ್ ಸಂಚಾರ ಸ್ಥಗಿತ
ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಯಚೂರಲ್ಲಿ ಸರ್ಕಾರಿ ಬಸ್ ಸಂಚಾರವನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.
ಸರ್ಕಾರಿ ಬಸ್ ಸಂಚಾರ ಸ್ಥಗಿತ
ರಾಯಚೂರು, ಸಿಂಧನೂರು ನಗರಗಳಲ್ಲಿ ಬಸ್ ಸಂಚಾರ ಸೇವೆಯನ್ನು ಸ್ಥಗಿತಗೊಳಿಸಿ, ಜಿಲ್ಲೆಯ ಬೇರೆ ಭಾಗಗಳಲ್ಲಿ ಬಸ್ ಸಂಚಾರಕ್ಕೆ ಅವಕಾಶವಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿತ್ತು. ಇದಾದ ಬಳಿಕ ರಾತ್ರಿ ವೇಳೆ ಮರು ಆದೇಶ ಹೊರಡಿಸಿ, ಬಸ್ ಸಂಚಾರವನ್ನು ಜಿಲ್ಲೆಯಾದ್ಯಂತ ಸ್ಥಗಿತಗೊಳಿಸುವುದಾಗಿ ತಿಳಿಸಿತ್ತು.
ಜಿಲ್ಲಾಡಳಿತದ ಕೆಲ ಗೊಂದಲದಿಂದಾಗಿ ನಗರದ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಜಿಲ್ಲೆಯ ನಾನಾ ಕಡೆ ತೆರಳಬೇಕಾದ ಶಿಕ್ಷಕರು ಸೇರಿದಂತೆ ಪ್ರಯಾಣಿಕರು ಬಸ್ಗಾಗಿ ಕಾಯುತ್ತಾ ಕುಳಿತಿದ್ದ ಮತ್ತು ಬಸ್ ಸಂಚಾರವಿಲ್ಲವೆಂದ ಬಳಿಕ ವಾಪಸ್ ತೆರಳುತ್ತಿದ್ದ ದೃಶ್ಯಗಳು ಕಂಡು ಬಂದವು.