ಕರ್ನಾಟಕ

karnataka

ETV Bharat / state

ದೇವದುರ್ಗದ ಸಂತ್ರಸ್ತರ ಗಂಜಿ ಕೇಂದ್ರಕ್ಕೆ ಅಪರ ಮುಖ್ಯಕಾರ್ಯದರ್ಶಿ ಭೇಟಿ, ಪರಿಶೀಲನೆ

ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಜಾವೇದ್ ಅಕ್ತರ್ ದೇವದುರ್ಗ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿರುವ ಗಂಜಿ ಕೇಂದ್ರಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

govt chief Secretary visit in flood affected residents

By

Published : Aug 18, 2019, 1:41 PM IST

ರಾಯಚೂರು: ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಜಾವೇದ್ ಅಕ್ತರ್ ದೇವದುರ್ಗ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿರುವ ಗಂಜಿ ಕೇಂದ್ರಕ್ಕೆ ಭೇಟಿ ನೀಡಿದ್ರು.

ಸಂತ್ರಸ್ತರಿಗೆ ಒದಗಿಸುತ್ತಿರುವ ಸೌಲಭ್ಯಗಳ ಕುರಿತು ಅವರು ಮಾಹಿತಿ ಪಡೆದರು. ಬಳಿಕ ಸಂತ್ರಸ್ತರೊಂದಿಗೆ ಅಲ್ಲಿನ ಸ್ಥಿತಿಗತಿಗಳ ಕುರಿತು ಚರ್ಚಿಸಿದರು. ಅಪರ ಕಾರ್ಯದರ್ಶಿಗಳಿಗೆ ಜಿಲ್ಲಾಧಿಕಾರಿ ಶರತ್ ಬಿ.ಹಾಗೂ ಸ್ಥಳೀಯ ನೋಡಲ್ ಅಧಿಕಾರಿಗಳು ಸಾಥ್ ನೀಡಿದರು.

ಭಾರಿ ಮಳೆಯಿಂದ ಉಂಟಾಗಿದ್ದ ಪ್ರವಾಹದಿಂದಾಗಿ ಜನರು ಮನೆಗಳನ್ನು ತೊರೆದು ಗಂಜಿ ಕೇಂದ್ರಗಳಲ್ಲಿ ವಾಸ್ತವ್ಯ ಹೂಡಿದ್ದಾರೆ. ಪರಿಹಾರ ಕೇಂದ್ರಗಳಲ್ಲಿರುವ ಸಂತ್ರಸ್ತರ ಆಸ್ತಿ-ಪಾಸ್ತಿ ಮತ್ತು ಅವರ ಬದುಕು ನೀರಿನಲ್ಲಿ ಕೊಚ್ಚಿ ಹೋಗಿದೆ. ಸಂತ್ರಸ್ತರು ಸರ್ಕಾರದ ಪರಿಹಾರಕ್ಕಾಗಿ ಕಾಯುತ್ತಿದ್ದಾರೆ. ನಿರಾಶ್ರಿತರಾಗಿರುವ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡುವ ಮತ್ತು ಎಲ್ಲ ಸೌಲಭ್ಯಗಳನ್ನು ಒದಗಿಸುವುದಾಗಿ ಸರ್ಕಾರ ಭರವಸೆ ನೀಡಿದೆ.

ABOUT THE AUTHOR

...view details