ರಾಯಚೂರು: ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ ಗುರು ವೈಭೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಇಂದು ರಾಯರ 401ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ 427 ವರ್ಧಂತಿ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಅದ್ಧೂರಿಯಾಗಿ ನೆರವೇರಿದ ಶ್ರೀರಾಘವೇಂದ್ರ ಸ್ವಾಮಿಗಳ ಗುರು ವೈಭೋತ್ಸವ
ಇಂದು ಮಂತ್ರಾಲಯದ ರಾಯರ 401ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ 427 ವರ್ಧಂತಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗಡೆ ಹಾಗೂ ಸಾವಿರಾರು ಭಕ್ತರು ಹಾಜರಾಗಿದ್ದರು.
ಶ್ರೀರಾಘವೇಂದ್ರ ಸ್ವಾಮಿಗಳ ಗುರು ವೈಭೋತ್ಸವ
ಬೆಳಗ್ಗೆ ರಾಯರ ಮೂಲ ಬೃಂದಾವನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಶ್ರೀಮಠದ ಪ್ರಾಂಗಣದಲ್ಲಿ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಶ್ರೀರಾಘವೇಂದ್ರ ಸ್ವಾಮಿಗಳ ಸ್ವರ್ಣ ಮೂರ್ತಿ ಹಾಗೂ ಪಾದುಕೆಗಳಿಗೆ ಪೂಜೆ ನೇರವೇರಿಸಿದರು. ಈ ದಿನದ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗಡೆ ಹಾಗೂ ಸಾವಿರಾರು ಭಕ್ತರು ಭಾಗವಹಿಸಿದ್ದರು.
ಇಂದಿನಿಂದ ಆರು ದಿನಗಳ ಕಾಲ ಗುರು ವೈಭೋತ್ಸವ ನಡೆಯಲಿದೆ. ಇಂದು ರಾಯರ 401 ನೇ ಪಟ್ಟಾಭಿಷೇಕ ನೇರವೇರಿದ್ದು, ಸಂಜೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.