ಕರ್ನಾಟಕ

karnataka

ETV Bharat / state

ಬಿಜೆಪಿ ಸರ್ಕಾರ ರಚನೆಗೆ ಕಾರಣರಾದವರಿಗೆ ಸಚಿವ ಸ್ಥಾನ ನೀಡುವಂತೆ ಹೆಚ್.ವಿಶ್ವನಾಥ್ ಒತ್ತಾಯ - ಹೆಚ್.ವಿಶ್ವನಾಥ್ ಲೆಟೆಸ್ಟ್ ನ್ಯೂಸ್​

ಅನರ್ಹ ಶಾಸಕರು ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಸಚನೆಗೆ ಅನುವು ಮಾಡಿ ಕೊಟ್ಟಿದ್ದು, ಅವರಿಗೆ ಸಿಎಂಯವರು ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಮಾಜಿ ಶಾಸಕ ಹೆಚ್​.ವಿಶ್ವನಾಥ್​ರವರು ಮನವಿ ಮಾಡಿದ್ದಾರೆ.

H. Vishwanath
ಹೆಚ್.ವಿಶ್ವನಾಥ್

By

Published : Jan 12, 2020, 8:02 PM IST

ರಾಯಚೂರು :ಬಿಜೆಪಿ ಸರ್ಕಾರ ಅಧಿಕಾರ ಹಿಡಿಯಲು ಕಾರಣಿಭೂತರಾದ 17 ಜನರಿಗೆ ‌ಸಚಿವ ಸ್ಥಾನ ನೀಡಬೇಕೆಂದು ಮಾಜಿ ಶಾಸಕ ಹೆಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ.

ಮಾಜಿ ಶಾಸಕ ಹೆಚ್.ವಿಶ್ವನಾಥ್

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟ ವಿಸ್ತರಣೆಯ ವೇಳೆ 17 ಜನರಿಗೂ ಸಚಿವ ಸ್ಥಾನ ನೀಡಬೇಕು. ಮೈತ್ರಿ ಸರ್ಕಾರವನ್ನು ಅಧಿಕಾರದಿಂದ ಇಳಿಸಿ ಜನಪರ ಸರ್ಕಾರ ಸಂವಿಧಾನ ಬದ್ಧ ಸರ್ಕಾರಕ್ಕೆ ಅಧಿಕಾರ ಹಿಡಿಯುವಲ್ಲಿ 17 ಜನ ಮಾಜಿ ಹಾಗೂ ಹಾಲಿ ಶಾಸಕರು ಕಾರಣವಾಗಿದ್ದಾರೆ. ಉಪ ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡಬಾರದೆಂದು ಯಾವುದೇ ಕೋರ್ಟ್ ಹೇಳಿಲ್ಲ. ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೆ ಮುಂದೆ ನೋಡೋಣ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಮಂಗಳೂರು ಗಲಭೆ ಕುರಿತು ಸಿಡಿ ಬಿಡುಗಡೆ ಮಾಡಿರುವ ಕುರಿತು ಪ್ರತಿಕ್ರಿಯಿಸಿ, ಅಧಿಕಾರ ಕಳೆದುಕೊಂಡು ಅವರು ಮಾನಸಿಕ ನೆಮ್ಮದಿ ಕಳೆದುಕೊಂಡಿದ್ದಾರೆ. ತಾವು ಒಬ್ಬ ಮಾಜಿ ಸಿಎಂ ಹಾಗೂ ರಾಜ್ಯದ ನಾಯಕ ಎನ್ನುವುದನ್ನು ತೋರಿಸಿಕೊಳ್ಳಲು ಹೀಗೆ ಹೇಳುತ್ತಿದ್ದಾರೆ. ಇಷ್ಟು ದಿನಗಳ ಬಳಿಕ ಸಿಡಿ ಬಿಡುಗಡೆ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ವ್ಯಂಗ್ಯವಾಡಿದರು.

ABOUT THE AUTHOR

...view details