ರಾಯಚೂರು :ರಾಜ್ಯದ ಜನರಿಗೆ ಸರಳವಾಗಿ ಮರಳು ದೊರೆಯುವಂತೆ ಹೊಸ ಮರಳು ನೀತಿ ಜಾರಿಗೆ ತರಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.
ಹೊಸ ಮರಳು ನೀತಿಯ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ಪ್ರತಿಕ್ರಿಯೆ ನೀಡಿರುವುದು.. ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಶಿಲ್ಪಾ ಮೆಡಿಕೇರ್ ಲಿಮಿಟೆಡ್ ಕಂಪನಿಯ ಶಿಲ್ಪಾ ಫೌಂಡೇಶನ್ ವತಿಯಿಂದ ಮಕ್ಕಳ ಚಿಕಿತ್ಸೆ ಘಟಕಕ್ಕೆ ಅತ್ಯಾಧುನಿಕ ಯಂತ್ರಗಳು ಹಾಗೂ ಬೆಡ್‌ಗಳನ್ನ ದೇಣಿಗೆ ನೀಡಿರುವ ಕೊಠಡಿಯನ್ನ ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎನ್ನುವ ಆರೋಪವಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹೊಸ ಮರಳು ನೀತಿ ಜಾರಿ ಮಾಡಲಾಗುತ್ತದೆ. ಆ ನೀತಿಯಿಂದ ಗ್ರಾಹಕರ ಮನೆಯವರಿಗೆ ಮರಳು ತಲುಪಿಸುವ ಹಾಗೂ ಸರಳವಾಗಿ ಸಿಗುವ ವ್ಯವಸ್ಥೆ ಮಾಡಲಾಗುವುದು ಎಂದರು.
ರಿಮ್ಸ್ ಆಸ್ಪತ್ರೆಯ ವಿಚಾರವಾಗಿ ಬೆಂಗಳೂರಿನಲ್ಲಿ ಆರೋಗ್ಯ ಸಚಿವರೊಂದಿಗೆ ಹಾಗೂ ಜಿಲ್ಲೆಯ ಶಾಸಕರೊಂದಿಗೆ ಸಭೆ ನಡೆಸಲಾಗಿದೆ. ಈ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ರೀತಿಯ ವೈದ್ಯಕೀಯ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗುವುದು. ಇಲ್ಲಿ ಎಲ್ಲಾ ಸೌಲಭ್ಯ ದೊರೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಹಾಗೂ ಮೂರು ವಾರಗಳ ಕಾಲ ಗಡುವು ನೀಡಲಾಗಿದೆ ಎಂದರು.
ಓದಿ:ನಿಜವಾದ ರೈತರು ಪ್ರತಿಭಟನೆ ಮಾಡಿ ಭಾರತ್ ಬಂದ್ಗೆ ಬೆಂಬಲ ನೀಡಿಲ್ಲ : ಸಚಿವ ನಾರಾಯಣಗೌಡ