ರಾಯಚೂರು: ಜವಾಹರ್ ನಗರದ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಇಂದು ಹರಿದಾಸ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು.
ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಹರಿದಾಸ ಸಾಹಿತ್ಯ ಸಮ್ಮೇಳನ
ಜವಾಹರ್ ನಗರದ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಇಂದು ಹರಿದಾಸ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು.
ಹರಿದಾಸ ಸಾಹಿತ್ಯ ಸಮ್ಮೇಳನ
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠ ಹಾಗೂ ಗುರುಸರ್ವಭೌಮ ಸಂಸ್ಕೃತ ವಿದ್ಯಾಪೀಠದ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ಈ 3 ದಿನಗಳ ಸಮ್ಮೇಳನಕ್ಕೆ ಮಂತ್ರಾಲಯದ ಮಠದ ಪೀಠಾಧಿಪತಿ ಶ್ರೀಸುಬುದೇಂದ್ರ ತೀರ್ಥ ಪಾದಂಗಳವರು ವಿದ್ಯುಕ್ತವಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನ್ಯಾಯಸುಧಾ ಮಂಗಳ ಮಹೋತ್ಸವ ನಡೆದಿದ್ದು, 6 ಜನ ವಿದ್ಯಾರ್ಥಿಗಳು ವಿವಿಧ ವಿಷಯಗಳ ಕುರಿತು ವಿಷಯ ಮಂಡಿಸಿದರು.