ಲಿಂಗಸುಗೂರು:ಅಕ್ರಮವಾಗಿ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಜಲೇರದೊಡ್ಡಿಯ ಪರಸಪ್ಪ ಗುಜ್ಜಲ ಹಾಗೂ ಅಮರೇಶ ಗುಜ್ಜಲ ಬಂಧಿತ ಆರೋಪಿಗಳು. ಇವರು ತಮ್ಮ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದರು.

ಈ ಕುರಿತು ಮಾಹಿತಿ ಪಡೆದ ಪೊಲೀಸರು, ಪೊಲೀಸ್ ವರಿಷ್ಠಾಧಿಕಾರಿ ಪ್ರಜಾಶ ನಿಕ್ಕಂ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಎಸ್.ಎಸ್. ಹುಲ್ಲೂರು ನೇತೃತ್ವದಲ್ಲಿ ಸಿಪಿಐ ಯಶವಂತ ಬಿಸನಳ್ಳಿ, ಪಿಎಸ್ಐ ಮುದ್ದುರಂಗಸ್ವಾಮಿ ಸಹಯೋಗದಲ್ಲಿ ದಾಳಿ ನಡೆಸಿ 16 ಸಾವಿರ ಮೌಲ್ಯದ 9 ಕೆಜಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.