ಲಿಂಗಸುಗೂರು (ರಾಯಚೂರು):ಹಟ್ಟಿ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಒಪ್ಪಂದದ ಮೇರೆಗೆ ಆಡಳಿತ ವಹಿಸಿಕೊಂಡಿವೆ. ಲಿಂಗಸುಗೂರು ತಾಲೂಕು ಹಟ್ಟಿ ಪಟ್ಟಣ ಪಂಚಾಯಿತಿ 13 ಸದಸ್ಯರ ಪೈಕಿ ಕಾಂಗ್ರೆಸ್ 08, ಜೆಡಿಎಸ್ 03, ಪಕ್ಷೇತರ ಇಬ್ಬರು ಸದಸ್ಯರ ಬಲ ಹೊಂದಿತ್ತು. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಎಂದು ಮೀಸಲಿರಿಸಿ ಆದೇಶ ಹೊರಡಿಸಲಾಗಿತ್ತು.
ಹಟ್ಟಿ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಹಂಚಿಕೊಂಡ ಕಾಂಗ್ರೆಸ್-ಜೆಡಿಎಸ್ - Local body election
ಕಾಂಗ್ರೆಸ್ 8 ಸದಸ್ಯರಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆದು ಇಬ್ಭಾಗವಾಗಿತ್ತು. 4 ಸದಸ್ಯರ ತಂಡ ಜೆಡಿಎಸ್ ಹಾಗೂ ಪಕ್ಷೇತರ ಸದಸ್ಯರ ಬೆಂಬಲದಿಂದ ಅಧ್ಯಕ್ಷ ಸ್ಥಾನ ಕಾಂಗ್ರೆಸ್, ಉಪಾಧ್ಯಕ್ಷ ಸ್ಥಾನ ಜೆಡಿಎಸ್ ಎಂದು ಹೊಂದಾಣಿಕೆ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿವೆ.

ಕಾಂಗ್ರೆಸ್ನಿಂದ ಮುನಿಸಿಕೊಂಡ ನಾಲ್ವರು ಸದಸ್ಯರ ತಂಡ ಹಿನ್ನಡೆ ಅನುಭವಿಸಿದೆ. ಜೆಡಿಎಸ್, ಪಕ್ಷೇತರರ ಬೆಂಬಲ ಸಿಗದ್ದರಿಂದ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿದ್ದರು.
ಮೀಸಲಾತಿ ಆಧರಿಸಿ ಅಧ್ಯಕ್ಷ ಸ್ಥಾನಕ್ಕೆ ವಿಜಯಮ್ಮ ನಾಗರೆಡ್ಡಿ ಜೇರಬಂಡಿ (ಕಾಂಗ್ರೆಸ್), ಉಪಾಧ್ಯಕ್ಷ ಸ್ಥಾನಕ್ಕೆ ನಾಗರತ್ನ ಶರಣಗೌಡ (ಜೆಡಿಎಸ್) ನಾಮಪತ್ರ ಸಲ್ಲಿಸಿದ್ದರು. ತಲಾ ಒಂದೊಂದೆ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಪರಿಶೀಲನೆ ನಡೆಸಿದ ಚುನಾವಣಾಧಿಕಾರಿ ಚಾಮರಾಜ ಪಾಟೀಲ್ ಅವಿರೋಧ ಆಯ್ಕೆ ಎಂದು ಘೋಷಿಸಿದರು.