ರಾಯಚೂರು:ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ಘೋಷಿಸಲಾಗಿದ್ದು, ಇಂದು ಮಧ್ಯಾಹ್ನ 12 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.
ಅಗತ್ಯ ವಸ್ತುಗಳ ಖರೀದಿಗೆ ರಾಯಚೂರಿನ ಮಾರುಕಟ್ಟೆಗಳಲ್ಲಿ ಜನಜಂಗುಳಿ - ರಾಯಚೂರಿನ ಲಾಕ್ ಡೌನ್
ಲಾಕ್ಡೌನ್ ಹಿನ್ನೆಲೆ ರಾಯಚೂರಿನಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಲು ಜನ ಮಾರುಕಟ್ಟೆಯಲ್ಲಿ ಮುಗಿಬಿದ್ದಿರುವುದು ಕಂಡು ಬಂತು.
ಮಾರುಕಟ್ಟೆಗಳಲ್ಲಿ ಜನ ಜಾತ್ರೆ ಕಂಡು ಬಂತು
ಲಾಕ್ಡೌನ್ ಹಿನ್ನೆಲೆ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಇದರಿಂದ ಮಾರುಕಟ್ಟೆಗಳಲ್ಲಿ ಜನಜಂಗುಳಿ ಕಂಡು ಬಂತು. ವಸ್ತುಗಳ ಖರೀದಿ ಭರಾಟೆಯಲ್ಲಿ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಕೆಲವರು ಮಾಸ್ಕ್ ಕೂಡ ಧರಿಸದೆ ಓಡಾಡುತ್ತಿರುವುದು ಕಂಡು ಬಂತು. ಜನರ ಸಂಖ್ಯೆ ಹೆಚ್ಚಿದ್ದರಿಂದ ವಾಹನ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆ ಮೂರು ದಿನಗಳ ಸಂಪೂರ್ಣ ಲಾಕ್ಡೌನ್ಗೆ ಜಿಲ್ಲಾಡಳಿತ ನಿರ್ಧರಿಸಿದೆ.