ರಾಯಚೂರು: ಜಿಲ್ಲೆಯ ವಿವಿಧೆಡೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದೆ. ಬೆಳಗ್ಗೆಯಿಂದ ಮೋಡಕವಿದ ವಾತಾವರಣ ಇತ್ತು. ಬಳಿಕ ಜಿಲ್ಲೆಯ ನಾನಾ ಕಡೆಗಳಲ್ಲಿ ಗುಡುಗು-ಮಿಂಚಿನನೊಂದಿಗೆ ವರುಣ ಅಬ್ಬರಿಸಿದ್ದಾನೆ.
ಬಿಸಿಲನಾಡಲ್ಲಿ ಗುಡುಗು-ಮಿಂಚು ಸಹಿತ ಅಬ್ಬರಿಸಿದ ವರುಣ
ರಾಜ್ಯದಲ್ಲಿ ಮಳೆಯಾರ್ಭಟ ಮುಂದುವರಿದಿದೆ. ರಾಯಚೂರಲ್ಲಿ ಇಂದು ಭಾರೀ ಮಳೆಯಾಗಿದ್ದು, ರಸ್ತೆ ಮೇಲೆ ನೀರು ಬಂದ ಕಾರಣ ವಾಹನ ಸವಾರರು ಪರದಾಡಬೇಕಾಯಿತು. ಅಲ್ಲದೆ ಮಳೆಯಿಂದಾಗಿ ಜಿಲ್ಲೆಯ ಕೃಷಿ ಚಟುವಟಿಕೆಗಳು ಚುರುಕು ಪಡೆಯುವ ಸಾಧ್ಯತೆಯಿದೆ.
ರಾಯಚೂರಲ್ಲಿ ಗುಡುಗು-ಮಿಂಚು ಸಹಿತ ಧಾರಕಾರ ಮಳೆ
ಮಳೆ ನೀರಿನಿಂದ ತಗ್ಗು ಪ್ರದೇಶಗಳಿಗೆ ಅಲ್ಲಲ್ಲಿ ನೀರು ನುಗ್ಗಿದೆ. ಅಲ್ಲದೆ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುವಂತಾಗಿತ್ತು.
ಜಿಲ್ಲೆಯ ರೈತರು ಬಿತ್ತನೆಗೆ ತಯಾರಿ ನಡೆಸುತ್ತಿದ್ದು, ಇಂದು ಸುರಿದ ಮಳೆಯಿಂದಾಗಿ ಕೃಷಿ ಚಟುವಟಿಕೆಗಳು ಇನ್ನಷ್ಟು ಚುರುಕು ಪಡೆದುಕೊಳ್ಳುವ ನಿರೀಕ್ಷೆ ಇದೆ.