ಕರ್ನಾಟಕ

karnataka

ETV Bharat / state

ರಾಯಚೂರು ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಮೂರು ಮನೆಗಳು ಕುಸಿತ... ಹೊಲ-ಗದ್ದೆಗಳು ಜಲಾವೃತ - ರಾಯಚೂರು ಮಳೆ ನ್ಯೂಸ್​

ರಾಯಚೂರು ಜಿಲ್ಲೆಯಾದ್ಯಂತ ಮಳೆ ತನ್ನ ರೌದ್ರಾವತಾರ ಮುಂದುವರಿಸಿದೆ. ಭಾರಿ ಮಳೆಯಿಂದಾಗಿ ತಾಲೂಕಿನಲ್ಲಿ ಮೂರು ಮನೆಗಳು ಕುಸಿದಿವೆ. ಮತ್ತೊಂದೆಡೆ ಜಮೀನುಗಳು ಜಲಾವೃತಗೊಂಡು ಕರೆಯಂತಾಗಿವೆ.

ರಾಯಚೂರು ಜಿಲ್ಲೆಯಾದ್ಯಂತ ಮುಂದುವರೆದ ವರುಣನ ಆರ್ಭಟ

By

Published : Sep 25, 2019, 11:06 AM IST

Updated : Sep 25, 2019, 12:11 PM IST

ರಾಯಚೂರು:ಕಳೆದ ರಾತ್ರಿ ರಾಯಚೂರು ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಭಾರಿ ಮಳೆಯಿಂದಾಗಿ ಜಿಲ್ಲೆಯ ರಾಯಚೂರು ತಾಲೂಕಿನಲ್ಲಿ ಮೂರು ಮನೆಗಳು ಕುಸಿದಿವೆ. ಆದ್ರೆ ಅದೃಷ್ಟವಶಾತ್​ ಅನಾಹುತ ತಪ್ಪಿದೆ. ನಗರದ ಸಿಯಾತಲಾಬ್ ಬಡವಣೆಯಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದು, ಅಲ್ಲಿನ ನಿವಾಸಿಗಳು ನೀರನ್ನು ಹೊರಹಾಕಲು ಪರದಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಜೀವ ಭಯದಿಂದ ಇಡೀ ರಾತ್ರಿ ಜಾಗರಣೆ ಮಾಡಿದ್ದಾರೆ.

ಭಾರಿ ಮಳೆಗೆ ಮನೆ ಕುಸಿತ

ನಗರದ ಎನ್​ಜಿಒ ಕಾಲೋನಿಯಲ್ಲಿನ ಶ್ರೀನೀಲಕಂಠೇಶ್ವರ ದೇವಾಲಯದ ಆವರಣದಲ್ಲಿದ್ದ ಅರ್ಚಕ ಶಂಕರಲಿಂಗ ಅವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ಮನೆಯಲ್ಲಿದ್ದ ಗೃಹ ಬಳಕೆಯ ವಸ್ತುಗಳು ಹಾಳಾಗಿವೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ನಗರದ ರಂಗಮಂದಿರದ ಬಳಿಯ ಸಾರ್ವಜನಿಕ ಉದ್ಯಾನವನದಲ್ಲೂ ಭಾರಿ ಪ್ರಮಾಣದ ನೀರು ಸಂಗ್ರಹವಾಗಿದೆ.

ರಾಯಚೂರು ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಮೂರು ಮನೆಗಳು ಕುಸಿತ... ಹೊಲ-ಗದ್ದೆಗಳು ಜಲಾವೃತ

ತಾಲೂಕಿನ ರಘುನಾಥನಹಳ್ಳಿ, ಹೋಸಪೇಟೆ-ಜೇಗರಕಲ್ ಗ್ರಾಮಕ್ಕೂ ನೀರು ನುಗ್ಗಿದ್ದು, ಹಳ್ಳಗಳು ಉಕ್ಕಿ ಹರಿಯುತ್ತಿವೆ. ಗ್ರಾಮದ ಹಳ್ಳದಿಂದ, ಪಕ್ಕದ ಜಮೀನಿಗಳಿಗೆ ನೀರು ನುಗ್ಗಿ ರೈತರ ಬೆಳೆಗಳು ನೀರುಪಾಲಾಗಿವೆ. ಜೊತೆಗೆ ಗ್ರಾಮಗಳಿಗೆ ಸಂಚರಿಸುವ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಬೆಳಗ್ಗೆ ಹಳ್ಳಿಗಳಿಂದ ಪಟ್ಟಣಕ್ಕೆ ತೆರಳುವ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪರದಾಡುವಂತಾಯಿತು.

Last Updated : Sep 25, 2019, 12:11 PM IST

ABOUT THE AUTHOR

...view details