ರಾಯಚೂರು:ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದೆ. ನಿನ್ನೆ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದೇವದುರ್ಗ ಪಟ್ಟಣದ ಕೇಂದ್ರೀಯ ಬಸ್ ನಿಲ್ದಾಣ ಸಂಪೂರ್ಣ ಜಲಾವೃತವಾಗಿದೆ.
ನಿರಂತರ ಮಳೆ: ದೇವದುರ್ಗ ಕೇಂದ್ರೀಯ ಬಸ್ ನಿಲ್ದಾಣ ಸಂಪೂರ್ಣ ಜಲಾವೃತ - raichur latest news
ನಿನ್ನೆ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಕೇಂದ್ರೀಯ ಬಸ್ ನಿಲ್ದಾಣ ಸಂಪೂರ್ಣ ಜಲಾವೃತವಾಗಿದೆ.
ನಿರಂತರ ಮಳೆ: ದೇವದುರ್ಗ ಕೇಂದ್ರೀಯ ಬಸ್ ನಿಲ್ದಾಣ ಸಂಪೂರ್ಣ ಜಲಾವೃತ
ಕೆಲ ವರ್ಷಗಳಿಂದ ಬಸ್ ನಿಲ್ದಾಣ ಕಾಮಗಾರಿ ಮಾಡಲಾಗುತ್ತಿದ್ದು, ಅದು ಇನ್ನೂ ಪೂರ್ಣಗೊಂಡಿಲ್ಲ. ಇದೀಗ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಸ್ ನಿಲ್ದಾಣ ಕೆರೆಯಂತಾಗಿದೆ.
ಬಸ್ ನಿಲ್ದಾಣ ಸಂಪೂರ್ಣ ಕೆರೆಯಂತಾಗಿದ್ದರಿಂದ ಪ್ರಯಾಣಿಕರು, ಸಾರಿಗೆ ಇಲಾಖೆ ಸಿಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ.