ರಾಯಚೂರು:ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಜಿಲ್ಲೆಯ ದೇವದುರ್ಗ ತಾಲೂಕಿನ ನರಗುಂಡದಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಮನೆಯಲ್ಲಿನ ದವಸ ಧಾನ್ಯಗಳು ನೀರುಪಾಲಾಗಿದ್ದು, ಇಡೀ ರಾತ್ರಿ ಮಲಗಲು ಜಾಗವಿಲ್ಲದೆ ಜನ ಪರದಾಡುವಂತಾಗಿತ್ತು.
ದೇವದುರ್ಗದಲ್ಲಿ ಭಾರೀ ಮಳೆ: 20ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು - ರಾಯಚೂರಲ್ಲಿ ಭಾರಿ ಮಳೆ
ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಜಿಲ್ಲೆಯ ದೇವದುರ್ಗ ತಾಲೂಕಿನ ನರಗುಂಡದಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಮನೆಯಲ್ಲಿನ ದವಸ ಧಾನ್ಯಗಳು ನೀರುಪಾಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ನರಗುಂಡ ಗ್ರಾಮ
ಸದ್ಯ ಮಳೆ ನೀರಿನಿಂದ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಘಟನೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಭಾರಿ ಮಳೆಯಾಗುವ ಲಕ್ಷಣಗಳಿವೆ.