ರಾಯಚೂರು:ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಕೊರೋನಾ ವೈರಸ್ ಹರಡಿದೆ ಎಂಬ ವದಂತಿಗಳಿಗೆ ಕಿವಿಗೊಡಬಾರದು ಎಂದು ಶಾಸಕ ಡಿ. ಎಸ್. ಹೂಲಗೇರಿ ಜನರಲ್ಲಿ ಮನವಿ ಮಾಡಿದರು.
ಕೊರೊನಾ ವೈರಸ್ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹೂಲಗೇರಿ ಸೂಚನೆ - MLA D S Holagiri
ಶಾಸಕ ಡಿ. ಎಸ್. ಹೂಲಗೇರಿ ಭಾನುವಾರ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿ ಕೊರೊನಾ ವೈರಸ್ ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.
ಕೊರೋನಾ ವೈರಸ್ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹೂಲಗೇರಿ ಸೂಚನೆ
ಭಾನುವಾರ ಆರೋಗ್ಯ ಇಲಾಖೆ ಅಧಿಕಾರಿಗಳ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ಶೀತ, ನೆಗಡಿ ಇತರೆ ರೋಗಗಳ ತುರ್ತು ಚಿಕಿತ್ಸೆಗೆ ಸೂಚಿಸಬೇಕು. ಗ್ರಾಮೀಣ ಆಸ್ಪತ್ರೆಗಳಲ್ಲಿ ಸ್ಥಳೀಯವಾಗಿ ವೈದ್ಯರು ಉಳಿದುಕೊಳ್ಳಲು ಸೂಚಿಸಬೇಕು ಎಂದು ಸಲಹೆ ನೀಡಿದರು.
ಇದೇ ವೇಳೆ ತಾಲೂಕು ಆರೋಗ್ಯಾಧಿಕಾರಿ ಮಾತನಾಡಿ, ವಿದೇಶ ಮತ್ತು ಹೊರ ರಾಜ್ಯದಿಂದ ಬಂದವರ ಬಗ್ಗೆ ನಿಗಾ ವಹಿಸಲಾಗಿದೆ. ತಾಲೂಕಿನಲ್ಲಿ ಈವರೆಗೆ ಸೋಂಕು ಪತ್ತೆಯಾಗಿಲ್ಲ. ಸ್ಥಳೀಯ ಆಸ್ಪತ್ರೆಯಲ್ಲಿ ತುರ್ತು ಘಟಕ ಆರಂಭಿಸಿದ್ದಾಗಿದೆ ಎಂದು ತಿಳಿಸಿದರು.