ರಾಯಚೂರು: ಕತ್ತಿಯಿಂದ ಕಡಿದು ಗೃಹಿಣಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಗಲಗ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೈಮೂದಾ ಬೇಗಂ ಚಾದಪಾಷಾ (26) ಮೃತ ಮಹಿಳೆ. ಗೃಹಿಣಿಯನ್ನು ಮನೆಯಲ್ಲಿಯೇ ಹತ್ಯೆ ಮಾಡಲಾಗಿದೆ. ಅನೈತಿಕ ಸಂಬಂಧವೇ ಘಟನೆಗೆ ಕಾರಣವೆಂದು ಹೇಳಲಾಗುತ್ತಿದೆ. ಈ ಸಂಬಂಧ ಜಾಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೂರು ದಾಖಲಾಗಿದೆ.
ಅನೈತಿಕ ಸಂಬಂಧ ಶಂಕೆ: ಕತ್ತಿಯಿಂದ ಕಡಿದು ಗೃಹಿಣಿಯ ಬರ್ಬರ ಕೊಲೆ - ದೇವದುರ್ಗ ತಾಲೂಕಿನ ಗಲಗ ಗ್ರಾಮ
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಲಗ ಗ್ರಾಮದಲ್ಲಿ ಗೃಹಿಣಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಗೃಹಿಣಿ ಬರ್ಬರ ಹತ್ಯೆ