ರಾಯಚೂರು : ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಸಂಶಯಗೊಂಡು ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ರೇಣುಕಾ(26) ಪತಿಯಿಂದ ಹತ್ಯೆಗೀಡಾದ ದುರ್ದೈವಿಯಾಗಿದ್ದು, ಜೆಟ್ಟಪ್ಪ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.
ಅನೈತಿಕ ಸಂಬಂಧ ಶಂಕೆ.. ಪತ್ನಿ ಕೊಂದ ಪತಿ - Etv Bharat kannada
ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಸಂಶಯಗೊಂಡು ವ್ಯಕ್ತಿಯೊಬ್ಬ ತಮ್ಮ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ.
ಅನೈತಿಕ ಸಂಬಂಧ ಶಂಕೆ.. ಪತ್ನಿಯ ಕೊಂದ ಪತಿ
ಜೆಟ್ಟಪ್ಪ ತನ್ನ ಪತ್ನಿ ರೇಣುಕಾ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅನುಮಾನಗೊಂಡು ಇಂದು ಬೆಳಗ್ಗೆ ಮನೆಯಲ್ಲಿದ್ದ ಕೊಡಲಿಯಲ್ಲಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಲಿಂಗಸೂಗೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ :ಹುಬ್ಬಳ್ಳಿ ಪೊಲೀಸರ ಕಾರ್ಯಾಚರಣೆ..ನಾಲ್ವರು ಅಂತರರಾಜ್ಯ ಕಳ್ಳರ ಬಂಧನ