ರಾಯಚೂರು : ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ 2.71 ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟ ಪರಿಣಾಮ ದೇವದುರ್ಗ ತಾಲೂಕಿನ ಹುವಿನಹಡಗಿ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ.
ಕೃಷ್ಣ ನದಿಗೆ 2.71 ಲಕ್ಷ ಕ್ಯೂಸೆಕ್ ನೀರು: ಕಲಬುರಗಿ- ದೇವದುರ್ಗ ಸಂಪರ್ಕ ಬಂದ್ - Huvinahadagi bridge
ಜಿಲ್ಲೆಯ ನಾರಾಯಣಪುರ ಜಲಾಶಯ ಭರ್ತಿಯಾಗಿದ್ದು ಕೃಷ್ಣಾ ನದಿಗೆ ಹೆಚ್ಚುವರಿ ನೀರು ಹರಿಬಿಟ್ಟಿದ್ದರಿಂದ ದೇವದುರ್ಗ ತಾಲೂಕಿನ ಹುವಿನಹಡಗಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೇತುವೆ ಮೇಲಿನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ಹುವಿನಹಡಗಿ ಬ್ರಿಜ್
ಸೇತುವೆ ಮುಳುಗಡೆಯಿಂದ ಸಾರ್ವಜನಿಕರು ಸಂಪರ್ಕವಿಲ್ಲದೆ ಪರದಾಡುವಂತಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕಲಬುರಗಿ ಮತ್ತು ದೇವದುರ್ಗ ಸಂಪರ್ಕ ಕಲ್ಪಿಸುವ ಹುವಿನಹಡಗಿ ಸೇತುವೆಯ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಇದರಿಂದ ಸಂಪರ್ಕ ವ್ಯವಸ್ಥೆ ಕಡಿತಗೊಂಡಿದೆ.
ನದಿಗೆ ಇನ್ನಷ್ಟು ನೀರು ಹರಿದು ಬರುವ ಸಾಧ್ಯತೆ ಇದ್ದು, ಜಿಲ್ಲೆಯ ಲಿಂಗಸುಗೂರು, ದೇವದುರ್ಗ, ರಾಯಚೂರು ಗ್ರಾಮೀಣ ಭಾಗದ ನದಿ ಪಾತ್ರದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಳುಗಡೆಯಾದ ಹುವಿನಹಡಗಿ ಸೇತುವೆಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ ನಡೆಸಿದರು.