ರಾಯಚೂರು:ನಾನು ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಬಿಡುವ ಪ್ರಮೇಯವೇ ಇಲ್ಲವೆಂದು ಲಿಂಗಸೂಗೂರು ಕಾಂಗ್ರೆಸ್ ಶಾಸಕ ಡಿ. ಎಸ್. ಹೊಲಗೇರಿ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಬಿಡುವ ಪ್ರಮೇಯವೇ ಇಲ್ಲ: ಲಿಂಗಸೂಗೂರು ಶಾಸಕ ಸ್ಪಷ್ಟನೆ - undefined
ಕಾಂಗ್ರೆಸ್‌ನ ಅತೃಪ್ತ ಶಾಸಕರ ಹೆಸರಲ್ಲಿ ನನ್ನ ಹೆಸರು ಕೇಳಿ ಬಂದಿದೆ. ಆದರೆ ಅದೆಲ್ಲಾ ಸುಳ್ಳು ಹಾಗೂ ಊಹಾಪೋಹ. ಯಾವುದೇ ಕಾರಣಕ್ಕೂ ಪಕ್ಷ ತ್ಯಜಿಸುವುದಿಲ್ಲ. ಹೈಕಮಾಂಡ್ ಏನು ತಿರ್ಮಾನ ಕೈಗೊಳ್ಳುತ್ತದೋ ಅದಕ್ಕೆ ಬದ್ಧನಾಗಿರುತ್ತೇನೆ ಎಂದು ಕಾಂಗ್ರೆಸ್ ಶಾಸಕ ಡಿ. ಎಸ್. ಹೊಲಗೇರಿ ಹೇಳಿದ್ದಾರೆ.

ಪಕ್ಷ ಬಿಡುವ ಪ್ರಮೇಯವೇ ಇಲ್ಲ
ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಅತೃಪ್ತ ಶಾಸಕರ ಹೆಸರಲ್ಲಿ ನನ್ನ ಹೆಸರು ಕೇಳಿ ಬಂದಿದೆ. ಆದರೆ ಅದೆಲ್ಲಾ ಸುಳ್ಳು ಹಾಗೂ ಊಹಾಪೋಹವಷ್ಟೇ. ಪಕ್ಷವನ್ನು ತ್ಯಜಿಸುವುದಿಲ್ಲ. ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತದೋ ಅದಕ್ಕೆ ಬದ್ಧನಾಗಿರುತ್ತೇನೆ ಎಂದಿದ್ದಾರೆ.
ಪಕ್ಷ ಬಿಡುವ ಪ್ರಮೇಯವೇ ಇಲ್ಲ
ಪ್ರಸ್ತುತ ರಾಜ್ಯದಲ್ಲಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಈಗ ರಾಜೀನಾಮೆ ನೀಡಿರುವ ಶಾಸಕರಲ್ಲಿ ಕೆಲವರಿಗೆ ಅಸಮಾಧಾನವಿರಬಹುದು. ಅದಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಎಂದು ಶಾಸಕ ಹೊಲಗೇರಿ ಹೇಳಿದ್ದಾರೆ.