ರಾಯಚೂರು: ಕೃಷ್ಣಾ ಮತ್ತು ತುಂಗಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿರುವ ಕುರಿತು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಹನುಮಂತ ತಿಳಿಸಿದ್ದಾರೆ.
ಅಕ್ರಮ ಮರಳು ಗಣಿಗಾರಿಕೆ ತಡೆಗೆ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ
ರಾಯಚೂರು, ದೇವದುರ್ಗ ಮತ್ತು ಮಾನವಿ ತಾಲೂಕು ವ್ಯಾಪ್ತಿಯಲ್ಲಿನ ಕೃಷ್ಣಾ ಮತ್ತು ತುಂಗಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿರುವ ಕುರಿತು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಹನುಮಂತ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರು, ದೇವದುರ್ಗ ಮತ್ತು ಮಾನವಿ ತಾಲೂಕು ವ್ಯಾಪ್ತಿಯಲ್ಲಿನ ಕೃಷ್ಣಾ ಮತ್ತು ತುಂಗಭದ್ರಾ ನದಿಯಲ್ಲಿ ಗಣಿಗಾರಿಕೆ ನಡೆಸಲು ಗುತ್ತಿಗೆದಾರರು ಟೆಂಡರ್ ಪಡೆದಿದ್ದಾರೆ. ಆದರೆ, ನಿಯಮಗಳ ಪ್ರಕಾರ ಮಾಡದೆ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿ ನಷ್ಟ ಮಾಡಿದ್ದಾರೆ. ಗುತ್ತಿಗೆದಾರರು ನಿಯಮಗಳನ್ನು ಗಾಳಿಗೆ ತೂರಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿರುವ ಹಿಂದೆ ಜಿಲ್ಲೆಯ ಜನ ಪ್ರತಿನಿಧಿಗಳ ಬೆಂಬಲವಿದೆ ಎಂದು ಆರೋಪಿಸಿದರು.
ಇನ್ನು, ಅಕ್ರಮ ಮರಳು ಸಾಗಾಣಿಕೆ ತಡೆ ಕುರಿತು ಜಿಲ್ಲಾಡಳಿತ ನೀಡಿದ ಭರವಸೆ ಹುಸಿಯಾಗಿದೆ. 2019 ರಿಂದ ಅಕ್ರಮ ಮರಳು ಸಾಗಾಣಿಕೆ ಕುರಿತು ರಾಜ್ಯದ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಬಾಕಿಯಿದ್ದು, ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ ಎಂದರು.