ಕರ್ನಾಟಕ

karnataka

ETV Bharat / state

ಅಕ್ರಮ ಮರಳು ಗಣಿಗಾರಿಕೆಗೆ ಕುಮ್ಮಕ್ಕು ಆರೋಪ: ರಾಯಚೂರಿನಲ್ಲಿ ಅಧಿಕಾರಿ ವಿರುದ್ಧ ದೂರು - Devadurga Police Station

ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಎಗ್ಗಿಲ್ಲದೆ ಸಾಗಿದೆ ಎಂಬ ಆರೋಪ ಕೇಳಿ ಬಂದಿದೆ.

dsds
ರಾಯಚೂರಿನಲ್ಲಿ ಅಧಿಕಾರಿ ವಿರುದ್ಧ ದೂರು

By

Published : Aug 28, 2020, 11:40 AM IST

ರಾಯಚೂರು: ಅಕ್ರಮ ಮರಳುಗಣಿಗಾರಿಕೆ ಸಹಕಾರ ನೀಡಿದ ಆರೋಪದಡಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ವಿಶ್ವನಾಥ್​ ಹಾಗೂ ನಿಯಮ ಬಾಹಿರವಾಗಿ ಮರಳುಗಾರಿಕೆ ನಡೆಸಿದ ಗುತ್ತಿಗೆದಾರರಾದ ಆನಂದ ದೊಡ್ಡಮನಿ, ಪಿ.ಎಲ್.ಕಬಳೆ ವಿರುದ್ಧ ದೂರು ದಾಖಲಾಗಿದೆ.

ಕೃಷ್ಣಾ ನದಿಯಲ್ಲಿ ಸಾಕಷ್ಟು ಮರಳು ಲಭ್ಯವಿದೆ. ನಿಯಮದ ಪ್ರಕಾರ ಜಿಲ್ಲೆಯ ದೇವದುರ್ಗ ತಾಲೂಕಿನ ಜೋಳದಡಗಿ ಗ್ರಾಮದ ಬಳಿಯ ಕೃಷ್ಣಾ ನದಿಯಲ್ಲಿ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಮರಳುಗಾರಿಕೆಗೆ ಅವಕಾಶವಿದೆ. 10 ಚಕ್ರದ ವಾಹನದಲ್ಲಿ ಮರಳು ಸಾಗಣಿಕೆಗೆ ಅವಕಾಶ ಕಲ್ಪಿಸಿ 14 ಮೆಟ್ರಿಕ್ ಟನ್ ಬದಲು 45 ಮೆಟ್ರಿಕ್ ಟನ್ ಮರಳು ಸಾಗಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಮರಳುಗಣಿಗಾರಿಕೆಗೆ ಗುತ್ತಿಗೆ ಪಡೆದವರು ನಿಯಮದ ಪ್ರಕಾರ ಮರಳುಗಾರಿಕೆ ನಡೆಸದೆ ಅಕ್ರಮವಾಗಿ ಮರಳುಗಾರಿಕೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಗುತ್ತಿಗೆದಾರರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಅಕ್ರಮ ಮರಳುಗಾರಿಕೆಗೆ ಸಹಕಾರ ನೀಡಿದ್ದಾರೆಂದು ಶರಣಪ್ಪರೆಡ್ಡಿ ಎಂಬುವವರು ದೇವದುರ್ಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ABOUT THE AUTHOR

...view details