ರಾಯಚೂರು:ಜಿಲ್ಲೆಯಲ್ಲಿ ಇಂದು 171 ನೂತನ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗುವ ಮೂಲಕ, ಸೋಂಕಿತರ ಸಂಖ್ಯೆ 5,366ಕ್ಕೆ ಏರಿಕೆಯಾಗಿದೆ.
ರಾಯಚೂರಿನಲ್ಲಿ ಏರಿಕೆಯಾಗುತ್ತಿರುವ ಕೊರೊನಾ: ಇಂದು 171 ಪ್ರಕರಣ - Raichur corona
ರಾಯಚೂರು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೆ ಏರಿಕೆಯಾಗುತ್ತಿದ್ದು, ಇಂದೂ ಸಹ 171 ನೂತನ ಕೊರೊನಾ ಪ್ರಕರಣಗಳು ದಾಖಲಾಗಿವೆ.
![ರಾಯಚೂರಿನಲ್ಲಿ ಏರಿಕೆಯಾಗುತ್ತಿರುವ ಕೊರೊನಾ: ಇಂದು 171 ಪ್ರಕರಣ ರಾಯಚೂರಿನಲ್ಲಿ ಏರಿಕೆಯಾಗುತ್ತಿರುವ ಕೊರೊನಾ ರಾಯಚೂರಿನಲ್ಲಿ ಕೊರೊನಾ ರಾಯಚೂರಿನಲ್ಲಿ ಕೊರೊನಾ ಕೇಸಸ್ ರಾಯಚೂರು ಕೊರೊನಾ ಕೊರೊನಾ ರಾಯಚೂರು Increasing corona in Raichur corona in Raichur Raichur corona 171 new cases today in Raichur](https://etvbharatimages.akamaized.net/etvbharat/prod-images/768-512-8467793-838-8467793-1597766472580.jpg)
ಇಂದು 171 ನೂತನ ಪ್ರಕರಣ
ಕೊರೊನಾ ಸೋಂಕಿನಿಂದ ಇಂದು ನಾಲ್ವರು ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಮೃತರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ. ಈವರೆಗೆ ಪತ್ತೆಯಾಗಿರುವ ಸೋಂಕಿತರಲ್ಲಿ 3,420 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 1,882 ಪ್ರಕರಣಗಳು ಸಕ್ರಿಯವಾಗಿವೆ.
ಇಂದು ಪತ್ತೆಯಾಗಿರುವ ಸೋಂಕಿತರನ್ನು ರೋಗದ ಗುಣ ಲಕ್ಷಣದ ಆಧಾರದ ಮೇಲೆ ಕೋವಿಡ್ ಕೇರ್ ಮತ್ತು ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗುತ್ತಿದೆ ಜೊತೆಗೆ ಸೋಂಕಿತರ ಸಂಪರ್ಕಗಳನ್ನು ಪತ್ತೆ ಹಚ್ಚಿ ಅಗತ್ಯ ಕ್ರಮ ಜರುಗಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.