ರಾಯಚೂರು: ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ 16 ಜನರಿಗೆ ಸೋಂಕು ತಗಲುವ ಮೂಲಕ ಸೋಂಕಿತರ ಸಂಖ್ಯೆ 631ತಲುಪಿದೆ.
ರಾಯಚೂರು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ, ಆತಂಕದಲ್ಲಿ ಜನತೆ - ರಾಯಚೂರು ಸೋಂಕಿತರ ಸಂಖ್ಯೆ 631 ಸುದ್ದಿ
ಸೋಂಕಿತರಲ್ಲಿ 442 ಜನ ಗುಣಮುಖರಾಗಿದ್ದು, 183 ಪ್ರಕರಣಗಳು ಸಕ್ರಿಯವಾಗಿವೆ. ಉಸಿರಾಟ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ 70 ವರ್ಷದ ವೃದ್ದನಿಗೆ ಸೋಂಕು ದೃಢಪಟ್ಟಿತ್ತು. ಈ ವೇಳೆ ಅವರನ್ನು ಐಸೊಲೇಷನ್ ವಾರ್ಡ್ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ.
ಸೋಂಕಿತರಲ್ಲಿ 442 ಜನ ಗುಣಮುಖರಾಗಿದ್ದು, 183 ಪ್ರಕರಣಗಳು ಸಕ್ರಿಯವಾಗಿವೆ. ಉಸಿರಾಟ, ಅಧಿಕ ರಕ್ತದೊತ್ತಡದಂತಹ ಕಾಯಿಲೆಯಿಂದ ಬಳಲುತ್ತಿದ್ದ 70 ವರ್ಷದ ವೃದ್ದನಿಗೆ ಸೋಂಕು ತಗುಲಿತ್ತು. ಈ ವೇಳೆ ಅವರನ್ನು ಐಸೊಲೇಷನ್ ವಾರ್ಡ್ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಇದುವರೆಗೆ 27,001 ಗಂಟಲು ಮಾದರಿ ಸಂಗ್ರಹಿಸಲಾಗಿದ್ದು, ಇದರಲ್ಲಿ 23,916 ವರದಿಗಳು ನೆಗೆಟಿವ್ ಬಂದಿವೆ. ಇನ್ನುಳಿದ 2,447 ವರದಿಗಳು ಬರುವುದು ಬಾಕಿಯಿದೆ. ಜಿಲ್ಲೆಯಲ್ಲಿ 11,385 ಜನರನ್ನು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಇದರಲ್ಲಿ 11,250 ಸಾಂಸ್ಥಿಕ ಕ್ವಾರಂಟೈನ್ನಿಂದ ಬಿಡುಗಡೆ ಮಾಡಲಾಗಿದ್ದು, 135 ಜನರನ್ನು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗಿದ್ದರೆ, 3,434 ಜನರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.