ರಾಯಚೂರು:ಜಿಲ್ಲೆಯಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನ ವಿಜೃಂಭಣೆಯಿಂದ ಆಚರಿಸಲಾಯಿತು.
ನಗರದ ಪೊಲೀಸ್ ಡಿ.ಆರ್.ಐ ಮೈದಾನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ನಿಂದ ಆಯೋಜಿಸಲಾಗಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶರತ್ ಬಿ. ರಾಷ್ಟ್ರ ಧ್ವಜಾರೋಹಣ ನೇರವೇರಿಸಿದ್ರು. ಬಳಿಕ ಪೊಲೀಸ್ ಇಲಾಖೆ, ಗೃಹ ರಕ್ಷಕ ದಳ ಸಿಬ್ವಂದಿ ಹಾಗೂ ನಾನಾ ಶಾಲಾ-ಕಾಲೇಜು ವಿದ್ಯಾರ್ಥಿಗಳು ಧ್ವಜವಂದನೆ ಸಲ್ಲಿಸಿ, ಆಕರ್ಷಕ ಪಂಥ ಸಂಚಲನ ನಡೆಸಿದ್ರು.