ರಾಯಚೂರು: ಕೊರೊನಾ ವೈರಸ್ ಹರಡುವ ಭೀತಿಯಿಂದ ದೇಶದಲ್ಲಿ ಲಾಕ್ಡೌನ್ ಆದೇಶ ಜಾರಿ ಮಾಡಲಾಗಿದೆ. ಇದರಿಂದಾಗಿ ಬಡವರಿಗೆ ಸಾಕಷ್ಟು ಸಮಸ್ಯೆಗಳಾಗುತ್ತಿವೆ. ಇದನ್ನು ಮನಗಂಡ ದೇವದುರ್ಗ ಶಾಸಕ ಬಡವರಿಗೂ ಊಟ ಸಿಗಿಲಿ ಎಂಬ ಉದ್ದೇಶದಿಂದ ಇಂದಿರಾ ಕ್ಯಾಂಟಿನ್ಗೆ ಚಾಲನೆ ನೀಡಿದ್ದಾರೆ.
ಬಡ ಕೂಲಿ ಕಾರ್ಮಿಕರ ಹಸಿವು ನೀಗಿಸಲು ಇಂದಿರಾ ಕ್ಯಾಂಟಿನ್ಗೆ ಚಾಲನೆ
ದೇಶದಲ್ಲಿ ಲಾಕ್ಡೌನ್ ಘೋಷಣೆ ಹಿನ್ನೆಲೆ ಬಡ ಕೂಲಿ ಕಾರ್ಮಿಕರಿಗೆ ಊಟೋಪಚಾರ ದೊರಕಲಿ ಎಂದು ಇಂದಿರಾ ಕ್ಯಾಟಿನ್ಗೆ ಚಾಲನೆ ನೀಡಲಾಗಿದೆ. ಜಿಲ್ಲೆಯ ದೇವದುರ್ಗ ಪಟ್ಟಣದ ತೋಟಗಾರಿಕಾ ಕಚೇರಿ ಹತ್ತಿರ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್ನಲ್ಲಿ ಎಂಎಲ್ಸಿ ಬಸವರಾಜ ಪಾಟೀಲ್ ಇಟಗಿ ಹಾಗೂ ಕೆ.ಶಿವನಗೌಡ ನಾಯಕ ಉಪಹಾರ ಸೇವಿಸುವ ಮೂಲಕ ಇದಕ್ಕೆ ಚಾಲನೆ ನೀಡಿದ್ದಾರೆ.
ಬಡ ಕೂಲಿ ಕಾರ್ಮಿಕರ ಹಸಿವು ನೀಗಿಸಲು ಇಂದಿರಾ ಕ್ಯಾಂಟಿನ್ಗೆ ಚಾಲನೆ
ಜಿಲ್ಲೆಯ ದೇವದುರ್ಗ ಪಟ್ಟಣದ ತೋಟಗಾರಿಕಾ ಕಚೇರಿ ಹತ್ತಿರ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್ನಲ್ಲಿ ಎಂಎಲ್ಸಿ ಬಸವರಾಜ ಪಾಟೀಲ್ ಇಟಗಿ ಹಾಗೂ ಕೆ.ಶಿವನಗೌಡ ನಾಯಕ ಉಪಹಾರ ಸೇವಿಸುವ ಮೂಲಕ ಇದಕ್ಕೆ ಚಾಲನೆ ನೀಡಿದ್ದಾರೆ.
ಬಡವರಿಗೆ ಊಟ, ಉಪಹಾರ ಸಿಗಲಿ ಎನ್ನುವ ದೃಷ್ಟಿಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟಿನ್ ಜಾರಿಗೆ ತಂದಿದ್ದರು. ಇದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂದುವರೆಸಿದ್ದು, ಇಂದಿರಾ ಕ್ಯಾಂಟಿನ್ ಲಾಭವನ್ನ ಪಟ್ಟಣದ ಜನರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.