ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಮಾನ್ವಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ರಾಜಾ ವೆಂಕಟಪ್ಪ ನಾಯಕಗೆ ಕೂಡ ಕೊರೊನಾ ಸೋಂಕು ದೃಢಪಟ್ಟಿದೆ.
ಜೆಡಿಎಸ್ ಶಾಸಕ ರಾಜಾ ವೆಂಕಟಪ್ಪ ನಾಯಕಗೆ ಕೊರೊನಾ - JDS MLA Raja Venkatappa nayaka corona news
ಜೆಡಿಎಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
JDS MLA Raja Venkatappa nayaka
ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಶಾಸಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಶಾಸಕರು ಕೆಲ ದಿನಗಳ ಹಿಂದೆ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಕ್ಕೆ ಗ್ರಾಮಸ್ಥರು ಮತ್ತು ತಮ್ಮ ಬೆಂಬಲಿಗಾರರೊಂದಿಗೆ ತೆರಳುವ ಮೂಲಕ ಭೇಟಿ ನೀಡಿದ್ದರು.