ಕರ್ನಾಟಕ

karnataka

ETV Bharat / state

ಕಲಾಪಕ್ಕೆ ಮಾಧ್ಯಮ ನಿರ್ಬಂಧ: ರಾಯಚೂರಲ್ಲಿ ಪತ್ರಕರ್ತರ ಪ್ರತಿಭಟನೆ - ಕಲಾಪಕ್ಕೆ ಮಾಧ್ಯಮ ನಿರ್ಬಂಧ ಹಿನ್ನಲೆ

ವಿಧಾನಸೌಧದ ಕಾರ್ಯಕಲಾಪ ವರದಿಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಸ್ಪೀಕರ್ ಆದೇಶವನ್ನು ವಿರೋಧಿಸಿ ಇಂದು ಜಿಲ್ಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದಿಂದ ಪತ್ರಕರ್ತರು ಸ್ಪೀಕರ್ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದರು.

Journalists protes

By

Published : Oct 11, 2019, 2:52 PM IST

ರಾಯಚೂರು:ವಿಧಾನ ಮಂಡಲ ಕಲಾಪಗಳಿಗೆ ವಿದ್ಯುನ್ಮಾನ ಟಿವಿ ಮಾಧ್ಯಮಗಳಿಗೆ ನಿರ್ಬಂಧಿಸಿರುವುದನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದಿಂದ ಪತ್ರಕರ್ತರು ಸ್ಪೀಕರ್ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದರು.

ಕಲಾಪಕ್ಕೆ ಮಾಧ್ಯಮ ನಿರ್ಬಂಧ : ರಾಯಚೂರಲ್ಲಿ ಪತ್ರಕರ್ತರ ಪ್ರತಿಭಟನೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್​ ಮಹತ್ವದ ಸ್ಥಾನವನ್ನು ಹೊಂದಿವೆ. ಜನಸಾಮಾನ್ಯರ ಆಶೋತ್ತರಗಳನ್ನು ನಾಡಿನ ಸರ್ವಾಂಗೀಣ ಅಭಿವೃದ್ಧಿ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಯುವ ವಿಧಾನ ಮಂಡಲ ಕಲಾಪಗಳನ್ನು ಟಿವಿ ಮಾಧ್ಯಮಗಳು ಪ್ರಸಾರ ಮಾಡುವುದಕ್ಕೆ ಅವಕಾಶ ಕಲ್ಪಿಸುವುದು ಸರಿಯಾದ ಕ್ರಮ. ಇದರಿಂದ ಕಲಾಪಗಳು ಇನ್ನಷ್ಟು ಪಾರದರ್ಶಕವಾಗಿ ಮತ್ತು ಜವಾಬ್ದಾರಿಯುತವಾಗಿ ನಡೆಯಲು ಸಾಧ್ಯವಾಗುತ್ತದೆ.

ಅಗತ್ಯವಿದ್ದರೆ ಅದಕ್ಕೊಂದು ಮಾಧ್ಯಮ ನೀತಿ ಸಂಹಿತೆ ರೂಪಿಸಬಹುದು. ಆದರೆ ಯಾವುದೇ ಚರ್ಚೆ ಅಭಿಪ್ರಾಯ ಪಡೆಯದೆ ನಿರ್ಬಂಧಿಸಿರುವುದು ಸರಿಯಲ್ಲ. ಈ ಬಗ್ಗೆ ತಕ್ಷಣ ಪರಿಶೀಲಿಸಿ ನಿರ್ಬಂಧ ಆದೇಶವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಮಟ್ಟದ ಪತ್ರಕರ್ತರ ಸಮಸ್ಯೆಗಳ ಕುರಿತು ಚರ್ಚಿಸಲು ಕೂಡಲೇ ಜಿಲ್ಲಾ ಮಟ್ಟದ ಮಾಧ್ಯಮ ಸಮಿತಿ ಸಭೆಯನ್ನು ಕರೆಯಬೇಕೆಂದು ಈ ಮೂಲಕ ಸಂಘವು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿತು.

ABOUT THE AUTHOR

...view details