ಕರ್ನಾಟಕ

karnataka

ETV Bharat / state

ಜಿಲ್ಲಾ ಕನ್ನಡ & ಸಂಸ್ಕೃತಿ ಇಲಾಖೆಯಿಂದ ಅನುದಾನದ ದುರ್ಬಳಕೆ : ಅಲ್ತಾಫ್ ರಂಗಮಿತ್ರ ಆರೋಪ - ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಸರ್ಕಾರದ ಅನುದಾನ ದುರುಪಯೋಗ ಮಾಡಿಕೊಂಡ ಬಗ್ಗೆ ತನಿಖೆಯಾಗಬೇಕು, ನೈಜ ಕಲಾವಿದರಿಗೆ ಅವಕಾಶ ಕಲ್ಪಿಸಬೇಕು..

Altaf Rangamitra
ಅಲ್ತಾಫ್ ರಂಗಮಿತ್ರ ಸುದ್ದಿಗೋಷ್ಠಿ

By

Published : Feb 1, 2021, 5:42 PM IST

ರಾಯಚೂರು :ಕೊರೊನಾ ಸಂಕಷ್ಟದ ನಂತರ ಕಲಾವಿದರ ನೆರವಿಗಾಗಿ ರಾಜ್ಯ ಸರ್ಕಾರದಿಂದ ಪ್ರತಿ ಜಿಲ್ಲೆಗೆ ಕಾರ್ಯಗಳನ್ನು ಆಯೋಜಿಸಲು 50 ಲಕ್ಷ ರೂ. ಅನುದಾನ ಬಂದಿದೆ. ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಕೆಲ ಕಲಾವಿದರೊಂದಿಗೆ ಒಪ್ಪಂದ ಮಾಡಿಕೊಂಡು ಅನುದಾನ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಲ್ತಾಫ್ ರಂಗಮಿತ್ರ ಆರೋಪಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಕೊರೊನಾ ಸಮಯದಲ್ಲಿ ತೀವ್ರ ಸಂಕಷ್ಟ ಅನುಭವಿಸಿದ ಕಲಾವಿದರ ಬದುಕು ಹೇಳತಿರದಂತಾಗಿತ್ತು.

ಕಳೆದ ನವೆಂಬರ್ ತಿಂಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಖಾಂತರ ಮಹಿಳಾ ಉತ್ಸವ, ಗಿರಿಜನರ ಉತ್ಸವ, ಸುಗ್ಗಿ ಹಬ್ಬ, ಸೌರಭ, ಯುವ ಸೌರಭ, ಜನಪದ ಉತ್ಸವ, ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಸುಮಾರು 50 ಲಕ್ಷ ರೂಪಾಯಿ ಪ್ರತಿ ಜಿಲ್ಲೆಗೆ ಬಂದಿದೆ.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡದೆ, ಕೆಲ ಕಲಾವಿದರ ಜೊತೆ ಒಪ್ಪಂದ ಮಾಡಿಕೊಂಡು ಅನುದಾನ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆಪಾದಿಸಿದ್ದಾರೆ.

ಅಲ್ತಾಫ್ ರಂಗಮಿತ್ರ ಸುದ್ದಿಗೋಷ್ಠಿ

ಈಗಾಗಲೇ ಜಿಲ್ಲೆಯಲ್ಲಿ ಈ ಎಲ್ಲಾ ಕಾರ್ಯಗಳನ್ನು ನಡೆಸಲಾಗಿದ್ದು, ಜಿಲ್ಲಾ ಮಟ್ಟದ ಕಾರ್ಯಕ್ರಮಗಳನ್ನು ಯಾವುದೇ ರೀತಿಯ ಪ್ರಚಾರವಿಲ್ಲದೆ ಕೇವಲ ದಾಖಲೆಗಾಗಿ ಆಯೋಜಿಸಿಲಾಗಿದೆ.

ಅಲ್ಲದೆ ಕೆಲ ಹವ್ಯಾಸಿ ಕಲಾವಿದರೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಅವರಿಗೆ ಮೂರು ನಾಲ್ಕು ಕಾರ್ಯಕ್ರಮ ನೀಡುವ ಮೂಲಕ ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡದೆ ಅನುದಾನ ದುರುಪಯೋಗ ಮಾಡಿಕೊಂಡಿದ್ದು, ನೈಜ ಕಲಾವಿದರಿಗೆ ಇದರಿಂದ ಯಾವುದೇ ರೀತಿಯ ಪ್ರಯೋಜನವಾಗದಂತೆ ಮಾಡಿದ್ದಾರೆ ಎಂದು ರಂಗಮಿತ್ರ ಕಿಡಿಕಾರಿದ್ದಾರೆ.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಸರ್ಕಾರದ ಅನುದಾನ ದುರುಪಯೋಗ ಮಾಡಿಕೊಂಡ ಬಗ್ಗೆ ತನಿಖೆಯಾಗಬೇಕು, ನೈಜ ಕಲಾವಿದರಿಗೆ ಅವಕಾಶ ಕಲ್ಪಿಸಬೇಕು ಎಂದು ಇದೇ ವೇಳೆ ಅವರು ಒತ್ತಾಯಿಸಿದರು.

ABOUT THE AUTHOR

...view details