ಕರ್ನಾಟಕ

karnataka

ETV Bharat / state

ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ... ಎತ್ತುಗಳಿಂದ ಭಾರವಾದ ಕಲ್ಲು ಎಳೆಯುವ ಸ್ಪರ್ಧೆ - etv bharat

ರಾಯಚೂರಿನ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ 'ಕಾರ ಹುಣ್ಣಿಮೆ'ಗೆ ಇಂದು ವಿದ್ಯುಕ್ತ ಚಾಲನೆ ದೊರೆತಿದೆ. ಕಾರ ಹುಣ್ಣಿಮೆ ಅಂಗವಾಗಿ ನಡೆಯುತ್ತಿರುವ ಈ ಹಬ್ಬದಲ್ಲಿ ಎತ್ತುಗಳಿಂದ ಭಾರವಾದ ಕಲ್ಲು ಎಳೆಯುವ ಸ್ಪರ್ಧೆ ಎಲ್ಲರ ಗಮನ ಸೆಳೆಯುತ್ತಿದೆ.

ಕಾರ ಹುಣ್ಣಿಮೆಗೆ ಅಭೂತ ಪೂರ್ವ ಚಾಲನೆ

By

Published : Jun 16, 2019, 7:19 PM IST

Updated : Jun 16, 2019, 9:55 PM IST

ರಾಯಚೂರು:ಬಿಸಿ ಬೇಸಿಗೆ ಕಳೆದು ಮುಂಗಾರು ಪ್ರಾರಂಭವಾಗಿದ್ದು, ರೈತ ಸಮುದಾಯದಲ್ಲಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಜನಪ್ರಿಯ ಹಬ್ಬಗಳಲ್ಲಿ ಒಂದಾಗಿರುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬಕ್ಕೆ ಇಂದು ಸಂಸದ ರಾಜಾ ಅಮರೇಶ್ವರ ನಾಯಕ ಚಾಲನೆ ಕೊಟ್ಟರು.

ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಸಂಭ್ರಮ

ಜಿಲ್ಲೆ ಸೇರಿದಂತೆ ನೆರೆಯ ರಾಜ್ಯಗಳಿಂದ ಆಗಮಿಸುವ ರೈತಾಪಿ ವರ್ಗ ಈ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ಕಳೆದ 19 ವರ್ಷಗಳಿಂದ ಕಾಪು ಸಮಾಜದ ನೇತೃತ್ವದಲ್ಲಿ ನಡೆಯುತ್ತಿರುವ ಈ ಹಬ್ಬಕ್ಕೆ ಇಲ್ಲಿನ ಎಪಿಎಂಸಿ, ಹಟ್ಟಿ ಚಿನ್ನದ ಗಣಿ ಕಂಪನಿ ಹಾಗೂ ವಿವಿಧ ಸಂಘ ಸಂಸ್ಥೆಗಳು ಅನುದಾನ ನೀಡಿ ಪೋಷಿಸುತ್ತಾ ಬಂದಿದೆ.

ಇಲ್ಲಿನ ಎಪಿಎಂಸಿಯಲ್ಲಿ ಪ್ರತೀ ವರ್ಷ 3 ದಿನಗಳ ಕಾಲ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ ವಿಜೃಂಭಣೆಯಿಂದ ನಡೆಯುತ್ತದೆ. ಎತ್ತುಗಳಿಂದ ಭಾರವಾದ ಕಲ್ಲು ಎಳೆಯುವ ಸ್ಪರ್ಧೆ ಈ ಹಬ್ಬದ ಪ್ರಮುಖ ಆಕರ್ಷಣೆ. ಇಂದು ರಾಜ್ಯದ ಎತ್ತುಗಳಿಂದ ಕಲ್ಲು ಎಳೆಯುವ ಸ್ಪರ್ಧೆ ನಡೆದಿದೆ. 2ನೇ ದಿನವಾದ ನಾಳೆ ಅಂತಾರಾಜ್ಯ ಎತ್ತುಗಳಿಗೆ ಕಲ್ಲು ಎಳೆಯುವ ಸ್ಪರ್ಧೆ ನಡೆಯಲಿದೆ. ಮೊದಲನೇ ದಿನ ರಾಜ್ಯದ ಎತ್ತುಗಳಿಂದ ಒಂದೂವರೆ ಟನ್ ಭಾರವಾದ ಕಲ್ಲು ಎಳೆಯುವ ಸ್ಪರ್ಧೆ ನಡೆದಿದ್ದು 9 ಜೋಡಿ ಎತ್ತುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

ಮೊದಲನೇ ಸ್ಥಾನ ಪಡೆದ ಎತ್ತುಗಳಿಗೆ 45 ಸಾವಿರ, 2ನೇ ಸ್ಥಾನ ಪಡೆದ ಎತ್ತುಗಳಿಗೆ 35 ಸಾವಿರ ಹಾಗೂ ಮೂರನೇ ಸ್ಥಾನಕ್ಕೆ 25 ಹಾಗೂ 4 ಮತ್ತು 5ನೇ ಸ್ಥಾನ ಪಡೆದ ಎತ್ತುಗಳಿಗೆ ತಲಾ 15 ಸಾವಿರ ಹಾಗೂ 10 ಸಾವಿರ ರೂ. ನಗದು ಬಹುಮಾನ ನೀಡಲಾಯಿತು.

Last Updated : Jun 16, 2019, 9:55 PM IST

ABOUT THE AUTHOR

...view details