ಕರ್ನಾಟಕ

karnataka

ETV Bharat / state

ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರಿಗೆ ರಕ್ಷಣೆ ನೀಡುವಂತೆ ಪ್ರಾಂತ ಕೃಷಿ ಕೂಲಿಕಾರರ ಸಂಘ ಆಗ್ರಹ

ಸಂಕಷ್ಟಕ್ಕೆ ಸಿಲುಕಿದ ಕಾರ್ಮಿಕರ ರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಒತ್ತಾಯಿಸಿದೆ.

Protest
Protest

By

Published : Jun 7, 2020, 5:07 PM IST

ಲಿಂಗಸುಗೂರು/ ರಾಯಚೂರು: ಲಾಕ್ ಡೌನ್​ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ ಕಾರ್ಮಿಕರ ರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಒತ್ತಾಯಿಸಿದೆ.

ಉದ್ಯೋಗ ಖಾತ್ರಿ ಯೋಜನೆ ಕೂಲಿಯನ್ನು ನಿತ್ಯ ರೂ. 600 ಕ್ಕೆ ಹೆಚ್ಚಿಸಿ ಕೆಲಸದ ದಿನಗಳನ್ನು 200 ಗಳಿಗೆ ಹೆಚ್ಚಿಸಬೇಕು, ಕೂಲಿಕಾರರ ಕುಟುಂಬಕ್ಕೆ ಮೂರು ತಿಂಗಳವರೆಗೆ ಕನಿಷ್ಠ 10 ಸಾವಿರ ರೂ. ಪರಿಹಾರ ನೀಡಬೇಕು, ಗ್ರಾಮ ಪಂಚಾಯತಿಗಳಿಗೆ ಹೆಚ್ಚುವರಿ ಅನುದಾನ ನೀಡಬೇಕು, ಮುಂದಿನ ಐದು ತಿಂಗಳು ಕುಟುಂಬದ ಸದಸ್ಯರಿಗೆ ತಿಂಗಳಿಗೆ 10 ಕೆ.ಜಿ ಅಕ್ಕಿ, 10 ಕೆ.ಜಿ ಗೋಧಿ ಹಂಚಿಕೆ ಮಾಡುವಂತೆ ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಿದರು.

ಈ ವೇಳೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಅಧ್ಯಕ್ಷ ದಾಸಪ್ಪ ರಾಠೋಡ ಮಾತನಾಡಿ, ನಿತ್ಯ ಕೂಲಿ ಮಾಡಿ ಕುಟುಂಬ ನಿರ್ವಹಣೆ ಮಾಡುವ ಕೂಲಿಕಾರರು ಕೆಲಸ ಸಿಗದೆ ಪರದಾಡುವಂತಾಗಿದೆ. ಇವರ ನೆರವಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ತಿಳಿಸಿದರು.

ABOUT THE AUTHOR

...view details