ರಾಯಚೂರು :ಆಶಾ ಕಾರ್ಯಕರ್ತರಿಗೆ ಮಾಸಿಕ ₹12 ಸಾವಿರ ನಿಗದಿ ಮತ್ತು ಬಾಕಿ ಉಳಿದ ಪ್ರೋತ್ಸಾಹ ಧನ ಬಿಡುಗಡೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ಪ್ರತಿಭಟಿಸಿದರು.
ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹12 ಸಾವಿರ ನಿಗದಿಗೆ ಒತ್ತಾಯ
ಕೋವಿಡ್ ವಿಶೇಷ ಪ್ರೋತ್ಸಾಹ ಧನ ₹3 ಸಾವಿರ ತಲುಪದಿರುವ ಆಶಾ ಕಾರ್ಯಕರ್ತೆಯರಿಗೆ ಪಾವತಿಯಾಗುವಂತೆ ಕ್ರಮ ಕೈಗೊಳ್ಳಬೇಕು ಹಾಗೂ ಇತರ ಪ್ರಮುಖ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಯಿತು..
ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ, ಜಿಲ್ಲಾಧಿಕಾರಿ ಸ್ಥಾನಿಕ ಅಧಿಕಾರಿಗೆ ಮನವಿ ಸಲ್ಲಿಸಿ ಆರೋಗ್ಯ ಇಲಾಖೆ ಹಾಗೂ ಜನ ಸಮೂಹದ ಮಧ್ಯ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವ ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರಿಗೆ ಬಾಕಿ ಇರುವ ಪ್ರೋತ್ಸಾಹ ಧನ ನೀಡಬೇಕು, ಭರವಸೆಯಂತೆ ಅವರಿಗೆ ಮಾಸಿಕ ಸಂಬಳ 12 ಸಾವಿರ ಘೋಷಿಸಬೇಕು, ಮೇಲಿಂದ ಮೇಲೆ ಎಲ್ಲಾ ಕಾರ್ಯಕರ್ತೆಯರಿಗೆ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದು ಒತ್ತಾಯಿಸಿದರು.
ಬಾಕಿ ಇರುವ ಪ್ರೋತ್ಸಾಹ ಧನ ಒದಗಿಸಲು ಸೂಕ್ತ ಕ್ರಮಕೈಗೊಳ್ಳಬೇಕು. ಘೋಷಿಸಿದ ಕೋವಿಡ್ ವಿಶೇಷ ಪ್ರೋತ್ಸಾಹ ಧನ ₹3 ಸಾವಿರ ತಲುಪದಿರುವ ಆಶಾ ಕಾರ್ಯಕರ್ತೆಯರಿಗೆ ಪಾವತಿಯಾಗುವಂತೆ ಕ್ರಮ ಕೈಗೊಳ್ಳಬೇಕು ಹಾಗೂ ಇತರ ಪ್ರಮುಖ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಯಿತು.