ಕರ್ನಾಟಕ

karnataka

By

Published : Aug 22, 2019, 8:52 AM IST

ETV Bharat / state

ರಾಜ್ಯದ ನೆರೆ ಪರಿಹಾರಕ್ಕೆ ಇನ್ನಷ್ಟು ನೆರವು ನೀಡಲು ಆಗ್ರಹ

ರಾಜ್ಯದಲ್ಲಿ ಈ ಬಾರಿ ಬಂದಿರುವ ಭಾರೀ ಮಳೆಗೆ ಕೇಂದ್ರ ಸರ್ಕಾರ ಇನ್ನಷ್ಟು ನೆರವು ನೀಡಬೇಕು ಎಂದು ಎಐಟಿಯುಸಿ ರಾಜ್ಯ ಮುಖಂಡ ಭಾಸ್ಕರ್ ಹೇಳಿದ್ದಾರೆ.

ಎಐಟಿಯುಸಿ ರಾಜ್ಯ ಮುಖಂಡ ಭಾಸ್ಕರ್ ಮಾತನಾಡಿದರು.

ರಾಯಚೂರು: ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾವಳಿಯಿಂದಾಗಿ ಸಾಕಷ್ಟು ಜನರು ತೊಂದರೆಗೆ ಸಿಲುಕಿದ್ದು, ಅಪಾರ ಪ್ರಮಾಣದ ಆಸ್ತಿ ನಾಶವಾಗಿದೆ. ಜನ-ಜಾನುವಾರುಗಳು ತತ್ತರಿಸುವಂತಾಗಿದೆ. ರಾಜ್ಯ ಸರ್ಕಾರ ಹಾನಿಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಇಷ್ಟು ಮಾತ್ರವಲ್ಲದೆ ಅಗತ್ಯ ನೆರವು ಕೋರಬೇಕು ಎಂದು ಎಐಟಿಯುಸಿ ರಾಜ್ಯ ಮುಖಂಡ ಭಾಸ್ಕರ್ ಹೇಳಿದರು.

ಎಐಟಿಯುಸಿ ರಾಜ್ಯ ಮುಖಂಡ ಭಾಸ್ಕರ್

ನಿರಂತರ ಬರದಿಂದ ತತ್ತರಿಸಿದ್ದ ರಾಜ್ಯದ ಜನರಿಗೆ ಈ ಬಾರಿಯ ಮಹಾಮಳೆ ಇಲ್ಲಿನ ಆಸ್ತಿ ಪಾಸ್ತಿ ನಾಶಗೊಳಿಸಿ ಸಂಕಷ್ಟಕ್ಕೆ ದೂಡಿದೆ. ಆದರೆ ಕೇಂದ್ರ ಸರ್ಕಾರ ಸಮೀಕ್ಷೆ ಮಾಡಿ ಅನುದಾನ ನೀಡಬೇಕಾಗಿತ್ತು. ಅದನ್ನು ಮಾಡದೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.

ಕೇಂದ್ರ ಸಚಿವರಾದ ರಾಜ್ಯದ ಇಬ್ಬರು ಮಂತ್ರಿಗಳು ಕೇಂದ್ರದ ಮೇಲೆ ಒತ್ತಡ ಹೇರಬೇಕು ಹಾಗೂ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಲು ಒತ್ತಡ ಹೇರಬೇಕು. ಕೇಂದ್ರ ಸರ್ಕಾರ ದಕ್ಷಿಣ ಭಾರತದ ರಾಜ್ಯಗಳನ್ನು ಕಡೆಗಣಿಸುತ್ತಿರುವುದು ಸರಿಯಲ್ಲ. ಕೂಡಲೇ ರಾಜ್ಯದ ಹಾನಿಯ ಕುರಿತು ಸಮೀಕ್ಷೆ ನಡೆಸಿ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಸರ್ಕಾರ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿರುವುದು ಸರಿಯಲ್ಲ. ಕಾರ್ಮಿಕ ವಿರೋಧಿ ನೀತಿಯನ್ನು ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ABOUT THE AUTHOR

...view details