ರಾಯಚೂರು: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾರ್ಹಕ ಅಧಿಕಾರಿ(ಸಿಇಒ) ಹುದ್ದೆಗೆ ನಿಯಮ ಉಲ್ಲಂಘಿಸಿ ನೂರ್ ಜಹರಾ ಖಾನಂ ವರ್ಗಾವಣೆ ಮಾಡಲಾಗಿದೆ ಎಂದು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಪೀಠ ಹೇಳಿದೆ. ನೂರ್ ಜಹರಾ ಖಾನಂ ಕೆಎಎಸ್ ಅಧಿಕಾರಿಯಾಗಿದ್ದರೂ ಅವರನ್ನು ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ ಆಗಿ ನೇಮಕ ಮಾಡಲಾಗಿತ್ತು. ಐಎಎಸ್ ಕೇಡರ್ನ ಜಿ.ಪಂ ಸಿಇಒ ಹುದ್ದೆಗೆ ಕೆಎಎಸ್ ಅಧಿಕಾರಿಯನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಜಿ.ಪಂ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಕೆಎಟಿ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೆಎಟಿ, ವರ್ಗಾವಣೆ ನಿಯಮ ಉಲ್ಲಂಘನೆಯಾಗಿದೆ ಎಂದು ಮಂಗಳವಾರ ತಿಳಿಸುವ ಮೂಲಕ ಸೂಕ್ತ ಕ್ರಮಕ್ಕೆ ಆದೇಶಿಸಿದೆ.
ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ ನೇಮಕ ಅನರ್ಹ: ಸೂಕ್ತ ಕ್ರಮಕ್ಕೆ ಕೆಎಟಿ ಆದೇಶ - ನೂರ್ ಜಹರಾ ಖಾನಂ ವರ್ಗಾವಣೆ ಅನರ್ಹ
ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ ಹುದ್ದೆಗೆ ನೂರ್ ಜಹರಾ ಖಾನಂ ಅವರನ್ನು ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಜಿ.ಪಂ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಕೆಎಟಿಗೆ ಅರ್ಜಿ ಸಲ್ಲಿಸಿದ್ದರು.
ನೂರ್ ಜಹರಾ ಖಾನಂ