ರಾಯಚೂರು:ರಾಜ್ಯದಲ್ಲಿ 32 ಜಿಲ್ಲೆಗಳಿವೆ ಎಂದು ಹೇಳಿಕೆ ನೀಡಿ ಎಲ್ಲರ ಟೀಕೆಗೆ ಗುರೆಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅದಕ್ಕೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸರ್ಕಾರದ ಅಂಕಿ-ಅಂಶಗಳ ಪ್ರಕಾರ 30 ಜಿಲ್ಲೆಗಳಿವೆ. ಸಂಘಟನೆ ಹಾಗೂ ಅಭಿವೃದ್ಧಿಗಾಗಿ ರಾಜ್ಯವನ್ನು ನಾವು 36 ಜಿಲ್ಲೆಗಳಾಗಿ ಮಾಡಿಕೊಂಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು.
ಯಾದಗಿರಿಯಲ್ಲಿ ಮಾತನಾಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ನಾನು ಈಗಾಗಲೇ 31 ಜಿಲ್ಲೆ ಪ್ರವಾಸ ಮುಗಿಸಿದ್ದು, ಇದು 32 ನೇ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದೇನೆ ಎಂದು ಹೇಳಿಕೆ ನೀಡಿದ್ದರು.
ನಗರದಲ್ಲಿ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಯಚೂರಿಗೆ ಕಾಂಗ್ರೆಸ್ ನ್ಯಾಯ ಸಲ್ಲಿಸಿಲ್ಲ. 60 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್ ವಿದ್ಯುತ್ ನೀಡಿಲ್ಲ. ಜಿಲ್ಲೆಗೆ ಐಐಟಿ ವಂಚಿಸಿದ್ದು, ಇದೀಗ ಬಿಜೆಪಿ ಅದನ್ನು ಐಐಐಟಿ (ತ್ರಿಬಲ್ ಐಟಿ) ಮಾಡಿದೆ. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನೂ ಪಿಎಂ ಆಗಬಹುದು ಎಂದು ಪ್ರಧಾನಿ ಮೋದಿ ಅವರು ತೋರಿಸಿಕೊಟ್ಟಿದ್ದಾರೆ ಎಂದರು.