ರಾಯಚೂರು :ಜಿಲ್ಲೆಯಲ್ಲಿ ಭೀಕರವಾಗಿ ಆವರಿಸಿರುವ ಬರಗಾಲದ ಬರ ಪರಿಹಾರ ಕಾಮಗಾರಿಗಳ ಪರಿಶೀಲನೆ ಸಭೆ ನಡೆಯಿತು. ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬೇಕಾಗಿತ್ತು. ಆದರೆ ಅಧಿಕಾರಗಳ ಸಮರ್ಪಕವಾದ ಮಾಹಿತಿ ಕೊರತೆಯಿಂದ ಸಭೆ ವಿಫಲಗೊಂಡಿತು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವರಿ ಕಾರ್ಯದರ್ಶಿ ಜಿ. ಕುಮಾರನಾಯಕ ಅಧ್ಯಕ್ಷತೆಯಲ್ಲಿ ಬರ ಪರಿಹಾರ ಕಾಮಗಾರಿ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲೆಯಲ್ಲಿ ಆವರಿಸಿರುವ ಬರದ ಕುರಿತು ಸಮರ್ಪಕವಾದ ಮಾಹಿತಿಯನ್ನ ಒದಗಿಸುವ ಜೊತೆಗೆ ಕೈಕೊಂಡು ಕಾಮಗಾರಿಗಳ ಬಗ್ಗೆ ಮಾಹಿತಿಯನ್ನ ಅಧಿಕಾರಿಗಳು ನೀಡಬೇಕಿತ್ತು. ಆದ್ರೆ ಆರ್ ಡಬ್ಲ್ಯೂಎಸ್ ಇಲಾಖೆಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿ ಕುರಿತಂತೆ ಸಮರ್ಪಕವಾದ ಮಾಹಿತಿ ನೀಡಿದ ಕಾರಣ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬೇಸರ ವ್ಯಕ್ತಪಡಿಸಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.