ರಾಯಚೂರು: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆಗೊಂಡ ಹಿನ್ನೆಲೆಯಲ್ಲಿ ರಾಯಚೂರು-ಕಲಬುರಗಿಗೆ ಸಂರ್ಪಕ ಕಲ್ಪಿಸುವ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಸ್ಥಗಿತಗೊಂಡಿದೆ.
ಕೃಷ್ಣೆಯ ಅಬ್ಬರ: ರಾಯಚೂರು-ಕಲಬುರಗಿ ಸಂಪರ್ಕ ಸೇತುವೆ ಬಂದ್
ರಾಯಚೂರಿನ ದೇವದುರ್ಗ ತಾಲೂಕಿನ ಹೂವಿನಹೆಡಗಿ ಗ್ರಾಮದ ಬಳಿ ರಾಯಚೂರು-ಕಲಬುರಗಿಗೆ ಸಂರ್ಪಕ ಕಲ್ಪಿಸುವ ಸೇತುವೆ ಮೇಲೆ ನೀರು ಹರಿಯುತ್ತಿದೆ. ಅಲ್ಲದೆ ಪಕ್ಕದ ಹೊಲ-ಗದ್ದೆಗಳಿಗೆ ನೀರು ನುಗ್ಗಿದ್ದು, ಉಕ್ಕಿ ಹರಿಯುತ್ತಿರುವ ನದಿ ನೋಡಲು ಜನರು ಆಗಮಿಸುತ್ತಿದ್ದಾರೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಹೂವಿನಹೆಡಗಿ ಗ್ರಾಮದ ಬಳಿ ಇರುವ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ನದಿಯಲ್ಲಿ ನೀರಿನ ಅಬ್ಬರ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರವನ್ನ ನಿಷೇಧಿಸಲಾಗಿತ್ತು. ಆದರೆ ಸೇತುವೆ ಮೇಲೆಯೇ ನೀರು ಹರಿಯುತ್ತಿದ್ದು, ನದಿ ಪಕ್ಕದಲ್ಲಿರುವ ಹೊಲ-ಗದ್ದೆಗಳು ಜಲಾವೃತಗೊಂಡಿವೆ.
ಅಲ್ಲದೇ ಸೇತುವೆ ಮೇಲೆ ಜನರು ತೆರಳದಂತೆ ಕ್ರಮ ಕೈಗೊಳ್ಳಲು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಜಿಲ್ಲಾಡಳಿತದಿಂದಲೂ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನೊಂದೆಡೆ ಇಷ್ಟು ದಿನಗಳಿಂದ ಬರಿದಾಗಿದ್ದ ನದಿ ಉಕ್ಕಿ ಹರಿಯುತ್ತಿರುವುದನ್ನು ನೋಡಲು ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.