ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಶಕ್ತಿನಗರದ ಮೇನ್ ಗೇಟ್ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಪಲ್ಟಿ... ಡ್ರೈವರ್, ಕಂಡಕ್ಟರ್ ಸೇರಿ 8 ಮಂದಿಗೆ ಗಾಯ - undefined
ಶಕ್ತಿ ನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿದಂತೆ 8 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
![ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಪಲ್ಟಿ... ಡ್ರೈವರ್, ಕಂಡಕ್ಟರ್ ಸೇರಿ 8 ಮಂದಿಗೆ ಗಾಯ](https://etvbharatimages.akamaized.net/etvbharat/images/768-512-2956475-thumbnail-3x2-bng.jpg)
ಕೆಎಸ್ಆರ್ಟಿಸಿ ಬಸ್ ಪಲ್ಟಿ
ಕೆಎಸ್ಆರ್ಟಿಸಿ ಬಸ್ ಪಲ್ಟಿ
ರಾಯಚೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ KA -35, F-200 ಬಳ್ಳಾರಿ ಡಿಪೋಗೆ ಸೇರಿದ ಬಸ್ ಇದಾಗಿದ್ದು, ಶಕ್ತಿನಗರದ ಮೇನ್ ಗೇಟ್ ಬಳಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಕಂಡಕ್ಟರ್ ಹಾಗೂ ಡ್ರೈವರ್ ಸೇರಿದಂತೆ ಎಂಟು ಜನರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ನಗರದ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ನಲ್ಲಿ ಸುಮಾರು 35ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತ ಸಂಬಂಧ ಶಕ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.