ರಾಯಚೂರು :ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ(ಎಸ್ಟಿ) ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಸಿಂಧನೂರಿನಲ್ಲಿ ಕಲಬುರಗಿ ವಿಭಾಗ ಮಟ್ಟದ ಬೃಹತ್ ಸಮಾವೇಶ ನಾಳೆ ನಡೆಯಲಿದೆ.
ಜಿಲ್ಲೆಯ ಸಿಂಧನೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕುರುಬ ಸಮುದಾಯದಿಂದ ಸಮಾವೇಶವನ್ನ ಆಯೋಜಿಸಲಾಗಿದೆ. ಇದಕ್ಕಾಗಿ ಬೃಹತ್ ವೇದಿಕೆ ಸಿದ್ಧಪಡಿಸಲಾಗುತ್ತಿದೆ. ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಒದಗಿಸಬೇಕು ಎಂದು ಹಲವು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ.