ರಾಯಚೂರು: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕುಸಿದಿದ್ದ ಸೇತುವೆಯ ಪರಿಶೀಲನೆ ನಡೆಸಲು ಶಾಸಕ ರಾಜಾ ವೆಂಕಟಪ್ಪನಾಯಕ ತೆರಳಿದ್ದರು. ಸೇತುವೆ ಪರಿಶೀಲನೆ ವೇಳೆ ಅದರ ಮುಂಭಾಗ ಕುಸಿದಿದ್ದು, ಶಾಸಕರು ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ.
ಸೇತುವೆ ವೀಕ್ಷಣೆಗೆ ಆಗಮಿಸಿದ ಶಾಸಕ: ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರು - Raja Venkatappa Nayaka
ರಾಯಚೂರು ಜಿಲ್ಲೆ ಮಾನವಿ ತಾಲೂಕಿನ ನುಗಡೋಣಿ - ಹೊಸೂರು ಸಂಪರ್ಕ ಸೇತುವೆ ಕಡಿತಗೊಂಡಿದ್ದು, ಸ್ಥಳ ಪರಿಶೀಲನೆಗೆ ತೆರಳಿದ ಶಾಸಕ ವೆಂಕಟಪ್ಪ ನಾಯಕ ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಳೆದ ಮೂರ್ನಾಲ್ಕು ದಿನದಿಂದ ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಗೆ ಮಾನವಿ ತಾಲೂಕಿನ ನುಗಡೋಣಿ - ಹೊಸೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿದುಬಿದ್ದಿತ್ತು. ಈ ಬಗ್ಗೆ ಪರಿಶೀಲನೆ ನಡೆಸಲು ತಮ್ಮ ಬೆಂಬಲಿಗರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ರಾಜಾ ವೆಂಕಟಪ್ಪನಾಯಕ, ಈ ಕುರಿತು ವೀಕ್ಷಣೆ ಮಾಡುತ್ತಿರುವ ವೇಳೆ ಸೇತುವೆ ಮುಂಭಾಗ ಕುಸಿದು ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಶಾಸಕರು ಅಪಾಯದಿಂದ ಪಾರಾಗಿದ್ದಾರೆ.
ಶಾಸಕರ ಜೊತೆಗಿದ್ದ ಇನ್ನಿಬ್ಬರು ಸೇತುವೆ ಕೆಳ ಭಾಗ ಬಿದ್ದಿದ್ದು, ಸ್ಥಳೀಯರು ಕೂಡಲೇ ಕೆಳಕ್ಕೆ ಬಿದ್ದವರನ್ನು ಮೇಲಕ್ಕೆತ್ತಿ ಶಾಸಕರ ವಾಹನದಲ್ಲಿಯೇ ಆಸ್ಪತ್ರೆಗೆ ರವಾನಿಸಿದ್ದಾರೆ.