ರಾಯಚೂರು:ರೈತರ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವಲ್ಲಿ ಬ್ಯಾಂಕ್ ಸಿಬ್ಬಂದಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದು, ಅಂತಹ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಎಚ್ಚರಿಕೆ ನೀಡಿದರು.
ನಿರ್ಲಕ್ಷ್ಯ ಧೋರಣೆ ಅನುಸರಿಸುವ ಬ್ಯಾಂಕ್ ಸಿಬ್ಬಂದಿ ವಿರುದ್ಧ ಸರ್ಕಾರಕ್ಕೆ ಪತ್ರ: ಜಿಲ್ಲಾಧಿಕಾರಿ ಎಚ್ಚರಿಕೆ - Prime Minister's Fasalu Bhima Insurance Plan
ರಾಯಚೂರು ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಮಂಗಳವಾರ 'ಪ್ರಧಾನಮಂತ್ರಿ ಫಸಲ್ ಭೀಮಾ ವಿಮೆ ಯೋಜನೆ' ಕುರಿತಂತೆ ವಿಮೆ ಕಂಪನಿಗಳ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ರೈತರಿಗೆ ಸೂಕ್ತ ಲಾಭ ದೊರೆಯದ ಬಗ್ಗೆ ಚರ್ಚಿಸಿದ್ದಾರೆ. ಈ ವೇಳೆ ಅವರು ರೈತರ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವ ಬ್ಯಾಂಕ್ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 'ಪ್ರಧಾನಮಂತ್ರಿ ಫಸಲ್ ಭೀಮಾ ವಿಮೆ ಯೋಜನೆ' ಕುರಿತಂತೆ ಕಂಪನಿಗಳ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಈ ವೇಳೆ ರೈತರಿಗೆ ಯೋಜನೆಯ ಲಾಭ ಸರಿಯಾಗಿ ದೊರಯದಿರುವುದರ ಕುರಿತು ಚರ್ಚಿಸಲಾಗಿದೆ. ಈ ಸಂದರ್ಭ ರೈತರ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡದೆ ಬ್ಯಾಂಕ್ ಸಿಬ್ಬಂದಿ ವಿನಾಕಾರಣ ನಿರ್ಲಕ್ಷ್ಯ ವಹಿಸಿದ್ದಾರೆ. ಅಲ್ಲದೇ ಅವರನ್ನು ವಿನಾಕಾರಣ ಅತ್ತಿಂದಿತ್ತ ಸುತ್ತಾಡಿಸುತ್ತಿದ್ದಾರೆ ಹೊರತು ಸರಿಯಾಗಿ ಮಾರ್ಗದರ್ಶನ ಮಾಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಅಧಿಕಾರಿಗಳ ಇಂತಹ ವರ್ತನೆಗಳಿಂದ ರೈತರಿಗೆ ಸೂಕ್ತ ಸೌಲಭ್ಯಗಳು ದೊರಕುತ್ತಿಲ್ಲ. ಹೀಗಾಗಿ ಕೂಡಲೇ ರೈತರು ಬ್ಯಾಂಕ್ ಖಾತೆ ಹೊಂದಿರುವ ಬ್ಯಾಂಕ್ ಗಳ ಪಟ್ಟಿ ಮಾಡಿ, ಯಾರು ಆಧಾರ ಕಾರ್ಡ್ ಲಿಂಕ್ ಮಾಡುತ್ತಿಲ್ಲ. ಅವರಿಗೆ ನೋಟಿಸ್ ನೀಡುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದ್ರು.
ಈಗಾಗಲೇ ಈ ವಿಚಾರದಲ್ಲಿ ಹೆಚ್ಚು ನಿರ್ಲಕ್ಷ್ಯ ತೋರಿದವರಿಗೆ ಸೂಚನೆ ನಂತರವೂ ತಿದ್ದಿಕೊಳ್ಳದ ಅಧಿಕಾರಿಗಳನ್ನು ಬೇರೆ ರಾಜ್ಯಗಳಿಗೆ ವರ್ಗಾವಣೆ ಮಾಡಲಾಗಿದೆ. ಒಂದು ವೇಳೆ ಅಲ್ಲಿಯೂ ಅಸಡ್ಡೆಯಿಂದ ನಡೆದುಕೊಂಡರೆ ಅಂತಹ ಅಧಿಕಾರಿಗಳ ವಿರುದ್ಧ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಖಡಕ್ ಆಗಿ ಹೇಳಿದ್ರು.