ರಾಯಚೂರು: ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ಸಮಸ್ಯೆ ಉದ್ಭವಿಸಿದ್ದು ಪಟ್ಟಣದ ಜನತೆ ಪರದಾಡುವಂತಾಗಿದೆ.
ಹಬ್ಬದ ದಿನದಂದು ವಿದ್ಯುತ್ ಸಮಸ್ಯೆ: ಜೆಸ್ಕಾಂ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ - ವಿದ್ಯುತ್ ಸಮಸ್ಯೆ
ಕಳೆದ ಮೂರು ತಿಂಗಳಿಂದ ದಿನಕ್ಕೆ 15-20 ಬಾರಿ ವಿದ್ಯುತ್ ಸಂಪರ್ಕ ಕಡಿತವಾಗುತ್ತಿದೆ. ಹಬ್ಬದ ದಿನವಾದ ಇಂದು ಸಹ ವಿದ್ಯುತ್ ಕಡಿತಗೊಂಡಿದ್ದು ಜನರು ಪರದಾಡುವಂತಾಗಿದೆ.
ಕಳೆದ ಮೂರು ತಿಂಗಳಿಂದ ದಿನಕ್ಕೆ 15-20 ಬಾರಿ ವಿದ್ಯುತ್ ಸಂಪರ್ಕ ಕಡಿತವಾಗುತ್ತಿದೆ. ಈ ಕುರಿತು ಅಧಿಕಾರಿಗಳ ಗಮನಕ್ಕೆ ತಂದರು ಸಹ ಪ್ರಯೋಜನವಾಗಿಲ್ಲ ಎಂದು ಗ್ರಾಹಕರು ದೂರಿದ್ದಾರೆ. ಜೆಸ್ಕಾಂ ಬಿಲ್ ಪಾವತಿಸುವುದು ತಡವಾದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಅಧಿಕಾರಿಗಳು ನಿರಂತರ ವಿದ್ಯುತ್ ನೀಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದು, ಹಿರಿಯ ಅಧಿಕಾರಿಗಳು ಗಮನ ಹರಿಸಬೇಕು ಎಂದಿದ್ದಾರೆ.
ನಾಗರ ಪಂಚಮಿ ಹಬ್ಬದ ದಿನದಂದು ಕೂಡ ಬೆಳಿಗ್ಗೆ 7ರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸಂಭ್ರಮದಿಂದ ಹಬ್ಬ ಆಚರಿಸಬೇಕಿದ್ದ ಮಹಿಳೆಯರು, ಮಕ್ಕಳು ನೀರಿಗಾಗಿ ಪರದಾಡುವಂತಾಗಿದೆ. ಜೆಸ್ಕಾಂ ನಿಯಮ ಉಲ್ಲಂಘಿಸಿ ಏಕಕಾಲಕ್ಕೆ ಇಡೀ ಪಟ್ಟಣದ ವಿದ್ಯುತ್ ಸಂಪರ್ಕ ಕಡಿತ ಮಾಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಗ್ರಾಹಕರಿಗೆ ನ್ಯಾಯ ಒದಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಪ್ರಭುಲಿಂಗ ಮೇಗಳಮನಿ ಒತ್ತಾಯಿಸಿದ್ದಾರೆ.