ಲಿಂಗಸುಗೂರು (ರಾಯಚೂರು): ಲಿಂಗಸುಗೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಹೆಡ್ ಕಾನ್ಸ್ಟೇಬಲ್ ಮಾನಯ್ಯ ಅವರಿಗೆ ಕೆಲ ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ವೇಣುಗ್ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.