ರಾಯಚೂರು:ಜಿಲ್ಲೆಯ ಲಿಂಗಸುಗೂರಲ್ಲಿ ಲಾಕ್ಡೌನ್ ನಿಮಿತ್ತ ಬುಧವಾರ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡಿದರು.
ಲಾಕ್ಡೌನ್ ಎಫೆಕ್ಟ್: ಲಿಂಗಸುಗೂರಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತ - Bus traffic
ಲಾಕ್ಡೌನ್ ನಿಮಿತ್ತ ಬುಧವಾರ ಲಿಂಗಸುಗೂರಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡಿದರು.
ಲಿಂಗಸುಗೂರಲ್ಲಿ ಲಾಕ್ಡೌನ್
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ ತಡೆಯಲು ರಾಜ್ಯ ಸರ್ಕಾರ ಕೈಗೊಂಡ ಕ್ರಮ ಬೆಂಬಲಿಸಿ, ರಾಯಚೂರು ಜಿಲ್ಲೆಯಾದ್ಯಂತ ಸಾರಿಗೆ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಅನ್ಯ ಜಿಲ್ಲೆಗಳಿಂದ ಕೂಡ ಬಸ್ಗಳು ಬಾರದಿರುವುದು ಕಂಡುಬಂತು.
ಮಧ್ಯಾಹ್ನ 2ಗಂಟೆ ನಂತರದಲ್ಲಿ ಅಗತ್ಯ ಸೇವೆಗಳು ಹೊರತುಪಡಿಸಿ ಉಳಿದೆಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಮಧ್ಯಾಹ್ನ 2 ಗಂಟೆಯಿಂದ ಮರುದಿನ ಬೆಳಗಿನ 8 ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳು ಮುಚ್ಚಲ್ಪಟ್ಟಿರುತ್ತವೆ ಎಂದು ತಾಲೂಕು ಆಡಳಿತ ತಿಳಿಸಿದೆ.