ರಾಯಚೂರು: ಗ್ರೀನ್ ಝೋನ್ನಲ್ಲಿ ಗುರುತಿಸಿಕೊಂಡಿರುವ ರಾಯಚೂರು ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದ್ದು, ವಾಹನಗಳ ಓಡಾಟ ಹೆಚ್ಚಾಗಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.
ಲಾಕ್‌ಡೌನ್ ಸಡಿಲಿಕೆ: ರಾಯಚೂರಿನಲ್ಲಿ ಟ್ರಾಫಿಕ್ ಜಾಮ್ - ರಾಯಚೂರು
ರಾಯಚೂರಿನಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಿದ್ದರಿಂದ ವಾಹನಗಳ ಓಡಾಟ ಹೆಚ್ಚಾಗಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.
ಲಾಕ್‌ಡೌನ್ ಸಡಿಲಿಕೆ: ರಾಯಚೂರಿನಲ್ಲಿ ಟ್ರಾಫಿಕ್ ಜಾಮ್
ನಗರದ ಚಂದ್ರಮೌಳೇಶ್ವರ ವೃತ್ತದಲ್ಲಿ ವಾಹನಗಳ ದಟ್ಟನೆ ಹೆಚ್ಚಾಗಿ ವಾಹನಗಳು ಟ್ರಾಫಿಕ್ನಲ್ಲಿ ಸಿಲುಕಿ ಪರದಾಡುವಂತಾಯಿತು. ಚಂದ್ರಮೌಳೇಶ್ವರ ವೃತ್ತದಿಂದ ಹತ್ತಿರದ ಆಸ್ಪತ್ರೆಗೆ ತೆರಳುತ್ತಿದ್ದ ಆ್ಯಂಬುಲೆನ್ಸ್ ಟ್ರಾಫಿಕ್ನಲ್ಲಿ ಸಿಲುಕಿಕೊಂಡಿತ್ತು. ಆಗ ಪೊಲೀಸರು ಆ್ಯಂಬುಲೆನ್ಸ್ಗೆ ದಾರಿ ಮಾಡಿ ಆಸ್ಪತ್ರೆಗೆ ತೆರಳಲು ಅವಕಾಶ ಮಾಡಿ ಕೊಟ್ಟರು.