ರಾಯಚೂರು:ದಾಳಿಂಬೆ ಹಣ್ಣು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಬನ್ನಿಗೋಳ ಗ್ರಾಮದ ಬಳಿ ನಡೆದಿದೆ.
ಲಾರಿ ಪಲ್ಟಿ, ದಾರಿಗೆ ಬಿತ್ತು ದಾಳಿಂಬೆ, ಅಂದಾಜು 7 ಲಕ್ಷ ರೂ ನಷ್ಟ - ಲಾರಿ ಪಲ್ಟಿ
ದಾಳಿಂಬೆ ಹಣ್ಣು ಸಾಗಿಸುತ್ತಿದ್ದ ಲಾರಿಯೊಂದು ಲಿಂಗಸೂಗೂರಿನಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಪಲ್ಟಿಯಾಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ದಾಳಿಂಬೆ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ
ಲಿಂಗಸೂಗೂರಿನಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಚಿಕ್ಕಹೆಸರೂರು ಮುಂಡರಗಿ ರಾಜ್ಯ ಹೆದ್ದಾರಿ ಮಾರ್ಗದಲ್ಲಿ ಈ ಅವಘಡ ಸಂಭವಿಸಿದೆ. ಲಾರಿ ಪಲ್ಟಿಯಾದ್ದರಿಂದ ಅದರಲ್ಲಿದ್ದ ಹಣ್ಣುಗಳು ಕೆಳಗೆ ಚೆಲ್ಲಿ ನಾಶವಾಗಿವೆ. ಇದರಿಂದ ಆಂದಾಜು 7 ಲಕ್ಷ ರೂಪಾಯಿ ನಷ್ಟವಾಗಿದೆ ಎನ್ನಲಾಗಿದೆ.
ಘಟನೆಯಿಂದ ಯಾವುದೇ ರೀತಿಯ ಪ್ರಾಣಹಾನಿ ನಡೆದಿಲ್ಲ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.