ರಾಯಚೂರು: ಯುವಕನೋರ್ವ ನೇಣಿಗೆ ಕೊರಳೊಡ್ಡಿದ್ದು, ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತಾಲೂಕಿನ ಜಾಗೀರ್ ವೆಂಕಟಾಪುರ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ.
ನೇಣಿಗೆ ಶರಣಾದ ಯುವಕ, ಪ್ರೇಮ ವೈಫಲ್ಯ ಶಂಕೆ - ಸರಕಾರಿ ಶಾಲೆ
ಯುವಕನೋರ್ವ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ತಾಲೂಕಿನ ಜಾಗೀರ್ ವೆಂಕಟಾಪುರ ಗ್ರಾಮದಲ್ಲಿ. ಯುವಕನ ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.
ಯುವಕ ಆತ್ಮಹತ್ಯೆ
ಜಾಗೀರ್ ವೆಂಕಟಾಪುರ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿನ ಗಿಡಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನನ್ನು ಬಸವ(22) ಎಂದು ಗುರುತಿಸಲಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಅದೇ ಗ್ರಾಮದ ಯುವತಿಯನ್ನ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ. ಆದ್ರೆ ಆಕೆ ನಿರಾಕರಿಸಿದ್ದಕ್ಕೆ ನೊಂದ ಯುವಕ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆಂದು ಎಂದು ತಿಳಿದುಬಂದಿದೆ.ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.